ಗದಗದಲ್ಲಿ ಉಚಿತ ಬ್ಯಾಗ್ ತಯಾರಿಕಾ ಶಿಬಿರ ಸಮಾರೋಪ
Free bag making camp concludes in Gadag
ಲೋಕದರ್ಶನ ವರದಿ
ಗದಗ 12: ‘ದಾರೀದೀಪ ಮಹಿಳಾ ವಿವಿಧೋದ್ದೇಶಗಳ ಸಂಸ್ಥೆ ಗದಗ ವತಿಯಿಂದ ಹುಡಕೋ ಕಾಲೋನಿಯ ಶ್ರೀ ಗುರು ಸಚ್ಚಿದಾನಂದ ಮಠದ ಆವರಣದಲ್ಲಿ ಆಯೋಜಿಸಿದ್ದ ಉಚಿತ ಬ್ಯಾಗ್ ತಯಾರಿಕಾ ಶಿಬಿರದ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಅವರು, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು ಇಂದಿನ ಅಗತ್ಯವಾಗಿದ್ದು, ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಬದ್ಧತೆಯಿರುವುದಾಗಿ ಹೇಳಿದರು.
ನಿವೃತ್ತ ಶಿಕ್ಷಕ ಎಸ್.ಎನ್. ಬಳ್ಳಾರಿ ಅವರು ಮಹಿಳೆಯರು ಉದ್ಯಮಿಗಳಾಗಿ ಬೆಳೆಯಬೇಕು ಎಂದು ಪ್ರೇರಣಾದಾಯಕವಾಗಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷೆ ಶಕುಂತಲಾ ಆರ್. ಮುಳಗುಂದ ಅವರು ಮಹಿಳಾ ಸಬಲೀಕರಣಕ್ಕೆ ಇಂತಹ ಶಿಬಿರಗಳು ಸಹಾಯಕವೆಂದು ಹೇಳಿದರು. ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 