ಪ್ರತಿಭಾವಂತ ಬಾಲಕಿಯರಿಗೆ ಉಚಿತ ಬೈಸಿಕಲ್ ವಿತರಣೆೆ
Free bicycle distribution to talented girls
ಹಾವೇರಿ 24: ಮಾನವೀಯತೆಯೇ ಹೃದಯದ ಬಡಿತ ಎಂಬ ಧ್ಯೇಯೋದ್ದೇಶ ಇಟ್ಟುಕೊಂಡು, ಸ್ನೇಹ, ಸೇವೆ ಮತ್ತು ತಿಳುವಳಿಕೆಯನ್ನು ಉತ್ತೇಜಿಸಿ ವಿಶ್ವದ ಎಲ್ಲ ಸಮುದಾಯಗಳಿಗೆ ಮಹಿಳೆಯರೇ ಸ್ವಯಂಸೇವಕರಾಗಿ ಸೇವೆ ಸಲ್ಲಿಸುವ ಒಂದು ನಿಸ್ವಾರ್ಥ ಸಂಘಟನೆಯೇ ಇನ್ನರ್ ವೀಲ್ ಸಂಸ್ಥೆಯಾಗಿದೆ ಎಂದು ಸಂಸ್ಥೆಯ ಜಿಲ್ಲಾಧ್ಯಕ್ಷೆ ಪ್ರತಿಭಾ ಹಾವನೂರ ಹೇಳಿದರು.
ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ನಂ-02 ರಲ್ಲಿ ಇನ್ನರ್ ವೀಲ್ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಬಡ, ಪ್ರತಿಭಾವಂತ ಬಾಲಕಿಯರಿಗೆ ಉಚಿತ ಬೈಸಿಕಲ್‌ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಪಂಚದಾದ್ಯಂತ ಪ್ರತಿಯೊಂದು ಧರ್ಮ, ದೇಶ, ಭಾಷೆ, ಸಂಸ್ಕೃತಿ, ಜನಾಂಗ, ಪಂಥ, ಬಣ್ಣ ಮತ್ತು ನಂಬಿಕೆಗಳನ್ನು ಇನ್ನರ್ ವೀಲ್ ಪ್ರತಿನಿಧಿಸುತ್ತದೆ. ವಿಶ್ವದ ನಾಗರೀಕರ ನಡುವೆ ಪ್ರೀತಿ, ವಿಶ್ವಾಸ ವೃದ್ಧಿಸಿ ಮಾನವ ಸಂಬಂಧಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಸರಕಾರಿ ಶಾಲೆಯ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೈಸಿಕಲ್ ನೀಡುವದು ಶಿಕ್ಷಣ ಬೆಳವಣಿಗೆಗೆ ನಮ್ಮ ಅಲ್ಪ ಸೇವೆಯಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಡಯಟ್‌ನ ಪ್ರಾಚಾರ್ಯ ಝಡ್.ಎಂ. ಖಾಜಿ ಮಾತನಾಡಿ, ಸರಕಾರಿ ಶಾಲೆಗಳ ಸಬಲೀಕಲರಣವು ಇಂದು ಅತೀ ಅವಶ್ಯವಾಗಿದೆ. ಸಾರ್ವಜನಿಕರ ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಶಾಲೆಗಳಿಗೆ ಉತ್ತಮ ಸೌಕರ್ಯಗಳನ್ನು ಒದಗಿಸಲು ಶಿಕ್ಷಕರು ಪ್ರಯತ್ನ ಮಾಡಿದಾಗ ಸರಕಾರಿ ಶಾಲೆಗಳೂ ಖಾಸಗಿ ಶಾಲೆಗಳಿಗೆ ಪ್ರಬಲ ಪೈಪೋಟಿಯನ್ನು ನೀಡಬಹುದು. ಗುಣಾತ್ಮಕ ಶಿಕ್ಷಣ ನಮ್ಮ ಮೊದಲ ಆದ್ಯತೆ ಆಗಿರಲಿ. ಇನ್ನರ ವೀಲ್‌ನ ಸಹಕಾರವು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.
ಅತಿಥಿಗಳಾಗಿದ್ದ ಜಿಲ್ಲಾ ಕಾರ್ಯದರ್ಶಿ ವಿರಾಜ್ ಕೋಟಕ್ ಮಾತನಾಡಿದರು. ಸಮಾರಂಭದಲ್ಲಿ ಖಜಾಂಚಿ ಶಿಲ್ಪಾ ಚುರ್ಚಿಹಾಳ, ಕಾರ್ಯದರ್ಶಿ ತೇಜಶ್ರೀ ಸುರಳಿಹಳ್ಳಿ, ಸುಧಾ ಆನೂರಶೆಟ್ರ, ಡಯಟ್‌ನ ಉಪನ್ಯಾಸಕ ಶೇಖರ ಹಂಚಿನಮನಿ, ಮಂಜುಳಾ ಚಂದ್ರಗಿರಿ, ಜೆ. ಆರ್. ಯಲವದಹಳ್ಳಿ, ಸಿಆರ್‌ಪಿ ಗೀರೀಶ ಮಲ್ಲಾಡದ, ಶಕುಂತಲಾ ಗುಡಗೂರಮಠ, ಎನ್.ವಾಯ್. ವಿಜಾಪುರ, ಎಸ್.ಎಸ್. ಜೇನು, ಎಸ್. ಸಿ. ರೂಗಿ, ದಿಲಶಾದ್ ನದಾಫ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಅಶ್ವಿನಿ ಕುಸನೂರ, ವಿಶ್ವನಾಥ ಪತ್ತಾರ, ನಾಗರಾಜ ದೊಡ್ಡಮನಿ, ಸಂಸ್ಥೆಯ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.ಆರಂಭದಲ್ಲಿ ಶಿಕ್ಷಕಿ ಕವಿತಾ ಅಣ್ಣಿಗೇರಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಜೆ.ಆರ್. ಯಲವದಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಚನ್ನವೀರಸ್ವಾಮಿ ಕುಲಕರ್ಣಿ ನಿರೂಪಿಸಿದರು. ಕೊನೆಯಲ್ಲಿ ಶಿವಲೀಲಾ ಹಿರೇಮಠ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 