ಉಚಿತ ಬಸ್, ರೂ. 2 ಸಾವಿರ ನೀಡಿದರೆ ಸಾಕೆ? ಮಹಿಳೆಯರಿಗೆ ರಕ್ಷಣೆ ಬೇಡವೇ?: ಸಂಸದ ಜಗದೀಶ ಶೆಟ್ಟರ್
Free bus, Rs. 2 thousand is enough? Don't women need protection?
ಬೆಳಗಾವಿ 03: ಇಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ವಿಷಾದಕರ ಸಂಗತಿ. ಸಾಮಾಜಿಕ ಸ್ವಾಸ್ಥ್ಯ ಕದಡುವ ಇಂಥ ಘಟನೆ ದಿನೇ ದಿನೆ ಹೆಚ್ಚುತ್ತಿದ್ದು, ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿರುವುದು ಇದರಿಂದ ಸ್ಪಷ್ಟವಾಗುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಟೀಕಿಸಿದ್ದಾರೆ.
ಈ ಕುರಿತು ಸೋಮವಾರ ಪ್ರಕಟಣೆ ನೀಡಿದ ಅವರು ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದರೆ ಮತ್ತು ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ರೂ. 2 ಸಾವಿರ ಹಾಕಿದರೆ ಸಾಲದು. ಹೆಣ್ಣು ಮಕ್ಕಳನ್ನು ಕಾಮುಕರಿಂದ ರಕ್ಷಿಸುವ ಕೆಲಸವಾಗಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಕಿಡಿಗೇಡಿಗಳಿಗೆ ಪೊಲೀಸರು ಮತ್ತು ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 