ಪತಂಜಲಿ ಯೋಗ ಸಮಿತಿಯಿಂದ ಉಚಿತ ಮಜ್ಜಿಗೆ ವಿತರಣೆ
Free buttermilk distribution by Patanjali Yoga Committee
ಲೋಕದರ್ಶನ ವರದಿ
ಹರಪನಹಳ್ಳಿ 22: ಬೇಸಿಗೆಯ ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪತಂಜಲಿ ಯೋಗ ಸಮಿತಿ, ಹರಪನಹಳ್ಳಿ ವತಿಯಿಂದ ಅಂಬೇಡ್ಕರ್ (ಐ.ಬಿ.) ವೃತ್ತದಲ್ಲಿ ತಂಪನೆಯ ಉಚಿತ ಮಜ್ಜಿಗೆ ವಿತರಣೆ ಮಾಡಲಾಯಿತು. ಮಧ್ಯಾಹ್ನ 12 ಗಂಟೆಯಿಂದ ಆರಂಭವಾದ ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳಿಂದ ವಿವಿಧ ಕೆಲಸಗಳಿಗಾಗಿ ಪಟ್ಟಣಕ್ಕೆ ಆಗಮಿಸಿದ್ದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪ್ರಯಾಣಿಕರು ಹಾಗೂ ವ್ಯಾಪಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, 500 ಕ್ಕೂ ಹೆಚ್ಚು ಸಾರ್ವಜನಿಕರು ಉಚಿತ ಮಜ್ಜಿಗೆಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಹೆಚ್. ಮಲ್ಲಿಕಾರ್ಜುನ ಅವರು, “ಬೇಸಿಗೆಯ ಅತಿಯಾದ ತಾಪಮಾನ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯವಾಗಿದ್ದು, ಸಮಾಜ ಸೇವೆಯ ಭಾಗವಾಗಿ ಇಂತಹ ಕಾರ್ಯಕ್ರಮಗಳನ್ನು ಮುಂದೆಯೂ ನಿರಂತರವಾಗಿ ನಡೆಸಲಾಗುವುದು” ಎಂದು ತಿಳಿಸಿದರು. ಬೇಸಿಗೆಯ ತೀವ್ರ ಬಿಸಿಲಿನಲ್ಲಿ ಜನರು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದು ಕೊಂಡಿರುವುದು ತುಂಬಾ ಸಂತೋಷ ತಂದಿದೆ ಎಂದರು.
ಬಿಸಿಲಿನ ತೀವ್ರತೆಯಿಂದ ಬಳಲುತ್ತಿದ್ದ ಸಾರ್ವಜನಿಕರು ಈ ಸೇವೆಯನ್ನು ಸಂತೋಷದಿಂದ ಸ್ವೀಕರಿಸಿದರು. ಮಜ್ಜಿಗೆ ವಿತರಣೆ ಮೂಲಕ ಜನರಿಗೆ ತಂಪು ಮತ್ತು ಆರಾಮ ದೊರಕಿದ್ದು, ಪತಂಜಲಿ ಯೋಗ ಸಮಿತಿಯ ಈ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಹೆಚ್. ಮಲ್ಲಿಕಾರ್ಜುನ, ಉಪಾಧ್ಯಕ್ಷ ಬಿ.ಸುದರ್ಶನ್, ಕಾರ್ಯದರ್ಶಿ ಕೆ.ಅರವಿಂದ್ ಶೆಟ್ಟಿ, ಖಜಾಂಚಿ ಡಾ.ವಿನಯ್ ಬೇಂದ್ರೆ, ಸಂಘಟನಾ ಕಾರ್ಯದರ್ಶಿ ಡಾ.ಎ.ಸಂತೋಷ್, ಸಪ್ನ ಮಲ್ಲಿಕಾರ್ಜುನ, ಅರ್ಚಿತ ಸಂತೋಷ, ಬಿ.ಹೆಚ್.ವಿನೂತ, ಕೆ.ರಂಜಿನಿ ಅರವಿಂದ, ಸೇರಿದಂತೆ ಹಲವರು ಭಾಗವಹಿಸಿ ಸಾರ್ವಜನಿಕರಿಗೆ ಉಚಿತವಾಗಿ ಮಜ್ಜಿಗೆ ವಿತರಿಸಿದರು. ಪತಂಜಲಿ ಯೋಗ ಸಮಿತಿಯ ಈ ಉಚಿತ ಮಜ್ಜಿಗೆ ವಿತರಣೆ ಕಾರ್ಯಕ್ರಮ ಸಾರ್ವಜನಿಕರಲ್ಲಿ ಉತ್ತಮ ಸ್ಪಂದನೆ ಪಡೆದು, ಮಾನವೀಯತೆ, ಸೇವಾಭಾವ ಮತ್ತು ಸಮಾಜಮುಖಿ ಚಟುವಟಿಕೆಯ ಸಾರ್ಥಕತೆಯನ್ನು ಮತ್ತೊಮ್ಮೆ ಎತ್ತಿಹಿಡಿದಂತಾಯಿತು.
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 