ಸಕ್ಕರೆ ಕಾರ್ಖಾನೆಯ ಸ.ಹಿ.ಪ್ರಾ ಶಾಲೆಗೆ ಉಚಿತ ಕಂಪ್ಯೂಟರ್ ವಿತರಣೆ
Free computer distribution to School of Sugar Factory
ಕಂಪ್ಲಿ:28. ಪಟ್ಟಣದ ಸಕ್ಕರೆ ಕಾರ್ಖಾನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರು ಇನ್ಫೋಸಿಸ್ ಕಂಪನಿಯಿಂದ ಹಳೆ ವಿದ್ಯಾರ್ಥಿಗಳ ಮೂಲಕ 10 ಗಣಕಯಂತ್ರ(ಕಂಪ್ಯೂಟರ್)ಗಳನ್ನು ಶನಿವಾರ ಕೊಡುಗೆಯಾಗಿ ನೀಡಿದರು.
ನಂತರ ಹಳೆ ವಿದ್ಯಾರ್ಥಿ ಹಾಗೂ ಇನ್ಫೋಸಿಸ್ ಸಂಸ್ಥೆಯ ಜಯತೀರ್ಥ ಆಚಾರ್ ಮಾತನಾಡಿ, ಕಂಪ್ಲಿಯ ಸಕ್ಕರೆ ಕಾರ್ಖಾನೆಯ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸದೊಂದಿಗೆ ಜೀವನ ರೂಪಿಸಿಕೊಂಡಿದ್ದೇವೆ. ಈಗ ಇಲ್ಲಿನ ಮಕ್ಕಳ ಶೈಕ್ಷಣಿಕ ಮಟ್ಟದ ಅಭಿವೃದ್ಧಿಗಾಗಿ ಬೆಂಗಳೂರು ಇನ್ಫೋಸಿಸ್ ಕಂಪನಿ ಮೂಲಕ ಹಳೆ ವಿದ್ಯಾರ್ಥಿಗಳ ಸಹಾಯ, ಸಹಕಾರದೊಂದಿಗೆ 10 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗದೊಂದಿಗೆ ಶಿಕ್ಷಣವಂತರಾಗಬೇಕು. ಮುಂದಿನ ದಿನದಲ್ಲಿ ಶಾಲೆಯಲ್ಲಿ ಸಿಸಿ ಕ್ಯಾಮರ ಅಳವಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮುಖ್ಯಗುರು ಪ್ರಭಾಕರ, ಎಸ್ಡಿಎಂಸಿ ಅಧ್ಯಕ್ಷ ರಾಮಲಿಂಗಪ್ಪ, ಹಳೆಯ ವಿದ್ಯಾರ್ಥಿಗಳಾದ ರಮೇಶರೆಡ್ಡಿ, ವೀರಾರೆಡ್ಡಿ, ಶಿವಪ್ಪಗೌಡ, ಮಾದವರೆಡ್ಡಿ, ಕಿನ್ನೂರೇಶ್ವರ ಸೇರಿದಂತೆ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 