ಕಿನ್ನಾಳ ಗ್ರಾಮದಲ್ಲಿ ಕುರಿ-ಮೇಕೆಗಳಿಗೆ ಉಚಿತ ಓಷಧ ವಿತರಣೆ
Free distribution of medicines for sheep and goats in Kinnala village
ಕೊಪ್ಪಳ, ಆ. 4: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಪಶು ಸಂಗೋಪನೆ ಇಲಾಖೆ ಹಾಗೂ ಶ್ರೀ ವೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಕುರಿ ಮತ್ತು ಮೇಕೆಗಳಿಗೆ ಉಚಿತ ಜಂತುನಾಶಕ ಓಷಧ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸರ್ಕಾರದ ಪಶು ಸಂಗೋಪನೆ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕ ಡಾ. ಮಲ್ಲಯ್ಯ ಅವರು ಉಚಿತ ಓಷಧ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ಕುರಿ ಮತ್ತು ಮೇಕೆ ಸಾಕಾಣಿಕೆದಾರರು ಜಾನುವಾರುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಪಶು ವೈದ್ಯರ ಸಲಹೆ ಪಡೆದು ಸೂಕ್ತ ಚಿಕಿತ್ಸೆ ಹಾಗೂ ಓಷಧೋಪಚಾರ ಮಾಡಿಸುವ ಮೂಲಕ ಜಾನುವಾರುಗಳ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮವು ಪಶು ಸಂಗೋಪನೆ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಕೊಪ್ಪಳ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಆನಂದ ದೇವರನಾವದಗಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ. ವಿನೋದ್ ಡಿವಟರ್, ಕಿನ್ನಾಳ ಪಶು ವೈದ್ಯಾಧಿಕಾರಿ ನಾಗರಾಜ್ ಕಲಾಲ್, ಗ್ರಾಮ ಪಂಚಾಯಿತಿ ಪಿಡಿಒ ಪರಮೇಶ್ವರಯ್ಯ ತಳಗಡೆ ಮಠ, ಶ್ರೀ ವೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಗ್ರಾಮದ ಮುಖಂಡ ರಾಘವೇಂದ್ರ ಡಂಬಳ, ಉಪಾಧ್ಯಕ್ಷ ಯಮನೂರ್ಪ ಲ್ಯಾವಕ್ಕಿ, ಸಂಘದ ಸದಸ್ಯರು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮದ ಕುರಿಗಾಯಿಗಳು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 