ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ

Free electric sewing machine distribution

ವಿಜಯಪುರ. ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ಇಲಾಖೆ ವತಿಯಿಂದ 2024-25 ನೇ ವರ್ಷದಲ್ಲಿ ಮಂಜೂರಾದ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ಫಲಿನುಭವಿಗಳಿಗೆ ವಿತರಿಸಿದರು.  

ಇಂದು ಸೋಮವಾರ ನಗರದಲ್ಲಿರುವ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಕೋಟಾ ಮತ್ತು ಬಬಲೇಶ್ವರ ತಾಲೂಕುಗಳ ಒಟ್ಟು 76 ವೃತ್ತಿಪರ ಅರ್ಹ ಮಹಿಳಾ ಕುಶಲಕರ್ಮಿಗಳಿಗೆ ಅವರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು.   

ಬಳಿಕ ಮಾತನಾಡಿದ ಸಚಿವರು, ಈ ಯಂತ್ರಗಳನ್ನು ಬಳಸಿಕೊಂಡು ಮಹಿಳೆಯರು ಸ್ವಾಭಿಮಾನಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.   

ಈ ಸಂದರ್ಭದಲ್ಲಿ ಜಿ.ಪಂ.ಹಾಗೂ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ಇಲಾಖೆ ಉಪನಿರ್ದೇಶಕ ಎಸ್‌. ಎಂ. ಪಾಟೀಲ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.