ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ
Free eye checkup and surgery camp- Savanur
ಸವಣೂರ 27: ತಾಲೂಕಿನ ಹತ್ತಿಮತ್ತೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್-01 ಶನಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆಯವರಿಗೆ ಆಯೋಜಿಸಿದ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತಾಗಲಿ ಎಂದು ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರಾದ ನಿಂಗಪ್ಪ ಎಂ ಆರೇರ ಹೇಳಿದರು.
ಹತ್ತಿಮತ್ತೂರಿನ ಸಂತೆ,ಅಂಗಡಿ ಹಾಗೂ ಸಾರ್ವಜನಿಕರಿಗೆ ಉಚಿತ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದ ಕರಪತ್ರಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಮಾರ್ಚ,01 ರಂದು ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ,ಶಿವಮೊಗ್ಗ.ಪ್ರಾಥಮಿಕ ಆರೋಗ್ಯ ಕೇಂದ್ರ,ಹತ್ತಿಮತ್ತೂರ ,ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಹಾವೇರಿ. ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮ,ತಾಲೂಕು ವೈಧ್ಯಾಧಿಕಾರಿಗಳ ಕಛೇರಿ,ಸವಣೂರ,ಗ್ರಾಮ ಪಂಚಾಯತಿ ಹತ್ತಿಮತ್ತೂರ ಹಾಗೂ ಆಶಾ ಕಾರ್ಯಕರ್ತೆಯರ ಸಂಯುಕ್ತಾಶ್ರಯದಲ್ಲಿ ಹತ್ತಿಮತ್ತೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಉಚಿತ ಶಿಬಿರ ಆಯೋಜಿಸಲಾಗಿದೆ.ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.ಸಾರ್ವಜನಿಕ ಸ್ಥಳಗಳಲ್ಲಿ ಶಿಬಿರದ ಕರಪತ್ರಗಳನ್ನು ಹಂಚಲಾಯಿತು.
ಈ ಸಂದರ್ಭದಲ್ಲಿ ಹತ್ತಿಮತ್ತೂರ ಗ್ರಾಮ ಪಂಚಾಯತಿ ಸದಸ್ಯರಾದ ರಮೇಶಗೌಡ ಓಂಟಿಗೌಡರ,ಊರಿಯರಾದ ಗುಡ್ಡಪ್ಪ ಹಿರೇಗೌಡ್ರ,ಶೇಖಪ್ಪ ಹಳೇಮನಿ,ಈರಪಾಕ್ಷಪ್ಪ ಹಕಾರಿ,ಗುಡ್ಡಪ್ಪ ಯಲಗಚ್,ಬಸಪ್ಪ ಬಾದಾಮಿ, ಬಸವರಾಜ ಮಂಟಗಣಿ,ಹನಮಂತಪ್ಪ ಯಲಗಚ್,108 ಚಾಲಕರಾದ ರವಿಕುಮಾರ ಮರಾಠಿ ಸೇರಿದಂತೆ ಅನೇಕರು ಸಹಕಾರ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 