ಸವಣೂರ 21: ತಾಲೂಕ ವೈಧ್ಯಾಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ,ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ. ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಅಮ್ಮಾ ಸಂಸ್ಥೆ(ರಿ)ಹಿರೇಮುಗದೂರ, ಹಾಗೂ ಕರ್ನಾಟಕ ರಾಜ್ಯ ವೃತ್ತಿಪರ ಶಿಕ್ಷಣ ಪದವೀಧರರ ಸಂಘ(ರಿ)ಹಾವೇರಿ ಇವುಗಳ ಸಂಯುಕ್ತಾಶ್ರಯದಲ್ಲಿ ಜ.25 ರ ಶನಿವಾರ ರಂದು ನಗರದ ಸವಣೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ 1 ಘಂಟೆಯವರಿಗೆ ಉಚಿತ ನೇತ್ರ ತಪಾಸಣೆ ಶಿಬಿರ ಹಾಗೂ ನೇತ್ರದಾನ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಸದುಪಯೋಗವನ್ನು ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಮ್ಮಾ ಸಂಸ್ಥೆ(ರಿ)ಉಪಾಧ್ಯಕ್ಷರಾದ ಗುರುಪಾದಪ್ಪ ಬಾಳಮ್ಮನವರ ಹಾಗೂ ಪದವೀಧರರ ಸಂಘ (ರಿ)ದ ಪ್ರಶಾಂತ ಟಿ ಕ್ಷತ್ರಿ ಪ್ರಕಟಣೆಗೆ ತಿಳಿಸಿದ್ದಾರೆ.