ಸಹಕಾರ ಸಪ್ತಾಹ ಅಂಗವಾಗಿ ಉಚಿತ ಆರೋಗ್ಯ ಶಿಬಿರ
Free health camp as part of Cooperative Week
ಲೋಕದರ್ಶನ ವರದಿ
ಗದಗ 06: ಸಹಕಾರ ಇಲಾಖೆ ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್, ಕೆಸಿಸಿ ಬ್ಯಾಂಕ್, ಧಾರವಾಡ ಹಾಲು ಒಕ್ಕೂಟ ಸೇರಿದಂತೆ ವಿವಿಧ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸಹಕಾರ ಸಚಿವಾಲಯದ ಐದು ವರ್ಷಗಳ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಹಕಾರ ಸಪ್ತಾಹ ಅಂಗವಾಗಿ ಖಾನಾಪುರದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಉಚಿತ ಆರೋಗ್ಯ ಶಿಬಿರ ಹಾಗೂ ವಿವಿಧ ತಳಿಯ ಜಾನುವಾರುಗಳ ಪ್ರದರ್ಶನ ಕಾರ್ಯಕ್ರಮ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕ ಎಚ್.ಜಿ. ಹಿರೇಗೌಡ ಉದ್ಘಾಟಿಸಿ ಮಾತನಾಡಿ, ಭಾರತವು ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದ್ದು, ಗ್ರಾಮೀಣ ಆರ್ಥಿಕತೆಯ ಬೆಳವಣಿಗೆಯಲ್ಲಿ ಹೈನುಗಾರಿಕೆ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು. ರೈತರ ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನ ಹಾಗೂ ಹೊಸ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಹೇಳಿದರು.
ಖಾನಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಎಚ್. ತಿಮ್ಮನಗೌಡ ಮಾತನಾಡಿ, 41 ವರ್ಷಗಳಿಂದ ಸಂಘವು ರೈತರ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಪೌಷ್ಟಿಕ ಆಹಾರ ಒದಗಿಸುವಲ್ಲಿ ಹಾಲು ಮತ್ತು ಹೈನುಗಾರಿಕೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಧಾರವಾಡ ಹಾಲು ಒಕ್ಕೂಟದ ಗದಗ ಉಪವಿಭಾಗದ ಮುಖ್ಯಸ್ಥ ಡಾ. ಪ್ರಸನ್ನ ಪಟ್ಟೇದ ಮಾತನಾಡಿ, ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆಯಿಂದ ಉತ್ಪಾದನೆ ಹಾಗೂ ಗುಣಮಟ್ಟ ಹೆಚ್ಚಳವಾಗಿದ್ದು, ಕೃತಕ ಬುದ್ಧಿಮತ್ತೆ ಸೇರಿದಂತೆ ಹೊಸ ತಂತ್ರಜ್ಞಾನಗಳ ಬಳಕೆ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 