ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ  Free health check-up camp by the Dharmasthala Rural Development Project


ಘಟಪ್ರಭಾ, ಸೆ. 8: ಸಮೀಪದ ಧೂಪದಾಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.  ಶಿಬಿರದಲ್ಲಿ ಬಡ ಹಾಗೂ ಅಗತ್ಯವಿರುವ ಜನರಿಗೆ ವಿವಿಧ ರೀತಿಯ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ, ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು.  

ಕಾರ್ಯಕ್ರಮದಲ್ಲಿ ಮಾತನಾಡಿದ ಕರವೇ ರೈತ ಘಟಕದ ಜಿಲ್ಲಾಧ್ಯಕ್ಷ ರೆಹಮಾನ್ ಮೊಕಾಶಿ, ಧರ್ಮಸ್ಥಳ ಮಂಜುನಾಥೇಶ್ವರ ಹೆಸರಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಳ್ಳುತ್ತಿರುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯವಾಗಿವೆ. ಪ್ರಸ್ತುತ ಸಂದರ್ಭದಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.  

ಕರವೇ ತಾಲೂಕು ಅಧ್ಯಕ್ಷ ಶೆಟ್ಟಪ್ಪ ಗಾಡಿವಡ್ಡರ ಹಾಗೂ ಕರವೇ ರೈತ ಘಟಕದ ತಾಲೂಕು ಅಧ್ಯಕ್ಷ ರವಿ ನಾವಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬೆಳೆಗಳಿಗೆ ಓಷಧ ಸಿಂಪಡಣೆ ಸೇರಿದಂತೆ ವಿವಿಧ ಕಾರಣಗಳಿಂದ ಜನರಲ್ಲಿ ರಕ್ತದೊತ್ತಡ, ಮಧುಮೇಹದಂತಹ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಲಬೀ ಅಂಗಲಗಿ ಅವರು ವಹಿಸಿದ್ದರು.  

ಈ ಸಂದರ್ಭದಲ್ಲಿ ರಾಜು ಗಾಡಿವಡ್ಡರ, ಯೋಜನಾಧಿಕಾರಿ ರೋಹಿತ್ ಎಚ್‌., ಕರಿಯಪ್ಪ ಧರ್ಮಟ್ಟಿ, ಜಯರತ್ನ, ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಅಮೃತ್ ಪಾಟೀಲ, ವಿಠ್ಠಲ ಗಾಡಿವಡ್ಡರ, ಆರೋಗ್ಯ ಇಲಾಖೆಯ ಸಿಎಚ್‌ಒ ರಾಜು ಕಣಗಲ್, ರಾಯಪ್ಪ ಬಂಡಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶಾಂತ ಅಂಗರಗಟ್ಟಿ, ನಿಧಿ ನಿರ್ಮಲ, ಶ್ರೀದೇವಿ, ಆಶಾ ಕಾರ್ಯಕರ್ತೆಯರು ಹಾಗೂ ಧರ್ಮಸ್ಥಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.