ಹಳೆಗುಡಗನಟ್ಟಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
Free health check-up camp in Halegudaganatti village
ಲೋಕದರ್ಶನ ವರದಿ
ಯಮಕನಮರಡಿ 27: ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿ, ಫೋರ್ಸೈಟ್ ಫೌಂಡೇಶನ್ ಹಾಗೂ ಐಐಟಿ ನವದೆಹಲಿ ಇವರ ಸಂಯುಕ್ತ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಗ್ರಾಮಸ್ಥರಿಗೆ ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೋಂದಣಿ ಹಾಗೂ ಇ-ಶ್ರಮ ಕಾರ್ಡ್ ನೋಂದಣಿ ಸೌಲಭ್ಯಗಳನ್ನು ಒದಗಿಸಲಾಯಿತು. ಶಿಬಿರದಲ್ಲಿ 105 ಫಲಾನುಭವಿಗಳು ಆಯುಷ್ಮಾನ್ ಭಾರತ್ ಹಾಗೂ ಇ-ಶ್ರಮ ಕಾರ್ಡ್ಗಳನ್ನು ಮಾಡಿಸಿಕೊಂಡು ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಪಡೆಯುವ ಅವಕಾಶವನ್ನು ಪಡೆದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಯತಿರಾಜ್ ದೇಶಪಾಂಡೆ ಜೀವನಶೈಲಿ, ನಿಯಮಿತ ಆರೋಗ್ಯ ತಪಾಸಣೆಯ ಮಹತ್ವ ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳ ತಡೆಗಟ್ಟುವಿಕೆ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಕಲ್ಯಾಣ ಸಂಸ್ಥೆಯ ಯೋಜನಾ ಸಂಯೋಜಕರಾದ ಶ್ರೀಮತಿ ಸುರೇಖಾ ಪಾಟೀಲ ಅವರು ಮಾತನಾಡಿ, ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು, ಪೌಷ್ಟಿಕ ಆಹಾರ ಸೇವನೆ, ವೈಯಕ್ತಿಕ ಸ್ವಚ್ಛತೆ ಹಾಗೂ ಸರ್ಕಾರಿ ಆರೋಗ್ಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಆರೋಗ್ಯವಂತ ಮಹಿಳೆಯೇ ಆರೋಗ್ಯವಂತ ಕುಟುಂಬ ಮತ್ತು ಸಮಾಜ ನಿರ್ಮಾಣದ ಆಧಾರ ಎಂದು ಅವರು ತಿಳಿಸಿದರು. ಗ್ರಾಮದ ಮಹಿಳೆಯರು ಹಾಗೂ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದು ಆಯೋಜಕರ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 