ಜಾರಕಿಹೊಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
Free health check-up camp in Jarakiholi village successful
ಯಮಕನಮರಡಿ 26: ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿಯ ಪೊರಸೈಟ್ ಫೌಂಡೇಶನ್ ಹಾಗೂ ಐಐಟಿ ನವದೆಹಲಿ ಸಹಯೋಗದಲ್ಲಿ ಹುಕ್ಕೇರಿ ತಾಲೂಕಿನ ಜಾರಕಿಹೊಳಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಜನರಿಗಾಗಿ ಉಚಿತ ಆರೋಗ್ಯ ತಪಾಸಣಾ ಹಾಗೂ ಜಾಗೃತಿ ಶಿಬಿರ ಆಯೋಜಿಸಲಾಯಿತು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಮತ್ತು ಕಣ್ಣಿನ ತಪಾಸಣೆ, ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಹಾಗೂ ಇ-ಶ್ರಮ ಕಾರ್ಡ್ ನೋಂದಣಿ ಸೌಲಭ್ಯ ಕಲ್ಪಿಸಲಾಯಿತು.
ಒಟ್ಟು 59 ಫಲಾನುಭವಿಗಳು ಕಾರ್ಡ್ಗಳನ್ನು ಪಡೆದು ವಿವಿಧ ಸರ್ಕಾರಿ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಪಡೆಯುವಂತಾಯಿತು. ವೈದ್ಯಾಧಿಕಾರಿ ಯತಿರಾಜ್ ದೇಶಪಾಂಡೆ ಆರೋಗ್ಯಕರ ಆಹಾರ, ವ್ಯಾಯಾಮ ಹಾಗೂ ಸ್ವಚ್ಛತೆಯ ಮಹತ್ವ ವಿವರಿಸಿದರು. ಯೋಜನಾ ಸಂಯೋಜಕಿ ಸುರೇಖಾ ಪಾಟೀಲ ಆರೋಗ್ಯ ರಕ್ಷಣೆಯಲ್ಲಿ ವೈಯಕ್ತಿಕ ಸ್ವಚ್ಛತೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಯೋಗೇಶ್ ಜೋಶಿ, ಕಿರಣ್ ಎಂ. ಚೌಗಲಾ, ಕುಮಾರ ಅಜ್ಜಪ್ಪಗೋಳ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 