ಹಿರಿಯ ನಾಗರಿಕರ ಉಚಿತ ಆರೋಗ್ಯ ತಪಾಸಣೆ
Free health check-up for senior citizens
ಸಂಕೇಶ್ವರ 24: ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗೆಗೆ ತೀವ್ರ ಕಾಳಜಿ ವಹಿಸಬೇಕು ಎಂದು ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಹೇಳಿದರು.
ಅವರು ಸಂಕೇಶ್ವರದಲ್ಲಿ ಹಿರಿಯ ಶಿಕ್ಷಕ ದಿವಂಗತ ಡಿ.ವಿ.ಪಟ್ಟಣಶೆಟ್ಟಿ ಅವರ ಸ್ಮರಣಾರ್ಥ ಶುಕ್ರವಾರ ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಏರಿ್ಡಸಿದ್ದ ಹಿರಿಯ ನಾಗರಿಕರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯ ನಾಗರಿಕರ ವಯೋಮಾನಕ್ಕೆ ಅನುಗುಣವಾಗಿ ದೇಹವು ವಿಭಿನ್ನ ಸಮಸ್ಯೆಗಳನ್ನು ಎದುರಿಸುತ್ತಿರುತ್ತದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕಡಿಮೆಯಾಗುವ ಎಲುಬಿನ ಸಾಂದ್ರತೆ,ಮೊನಕಾಲು ನೋವು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಇಂಥ ಸಂದರ್ಭದಲ್ಲಿ ತಕ್ಷಣವೇ ಆರೋಗ್ಯ ತಪಾಸಣೆ ಮಾಡಿಕೊಂಡು ತಕ್ಷಣವೇ ಓಷಧಿಗಳನ್ನು ತೆಗೆದುಕೊಳ್ಳಬೇಕೆಂದು ಅವರು ಹೇಳಿದರು.
ಶಿಬಿರದಲ್ಲಿ ಸಂಕೇಶ್ವರ ಮಿಷನ್ ಆಸ್ಪತ್ರೆಯ ವೈದ್ಯರ ತಂಡವು 65 ಹಿರಿಯ ನಾಗರಿಕರ ಆರೋಗ್ಯ ತಪಾಸಿಸಿ ಸಲಹೆಗಳನ್ನು ನೀಡಿತು.ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ಸಂಘದ ವತಿಯಿಂದ 22 ಸಾವಿರ ರೂಪಾಯಿ ಮೌಲ್ಯದ ಓಷಧಿಗಳನ್ನು ಹಿರಿಯ ನಾಗರಿಕರಿಗೆ ಉಚಿತವಾಗಿ ನೀಡಲಾಯಿತು.
ಶಿಬಿರದಲ್ಲಿ ಹಿರಿಯ ಸಹಕಾರಿ ಧುರೀಣರಾದ ಎಸ್.ಎಸ್.ಶಿರಕೋಳಿ, ಶಿವಾನಂದ ಸಂಸುದ್ದಿ, ಪ್ರಕಾಶ ಕಣಗಲಿ, ತಾಲೂಕಾ ವೈದ್ಯಾಧಿಕಾರಿ ಡಾ.ಉದಯ ಕುಡಚಿ, ಸಂಕೇಶ್ವರ ವೈದ್ಯರ ಸಂಘದ ಅಧ್ಯಕ್ಷ ವಿಕಾಸ ಪಾಟೀಲ, ಚಂದ್ರಕಾಂತ ಪಾಟೀಲ, ಮಂದಾರ ಹಾವಳ, ವಿನೋದ ಗಾಯಕವಾಡ, ಕಲ್ಪನಾ ಮನ್ನಿಕೇರಿ ಮುಂತಾದವರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 