ಉಚಿತ ಆರೋಗ್ಯ ತಪಾಸಣೆ
ಯಮಕನಮರಡಿ 14: ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಯಮಕನಮರಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ತಾಲೂಕಾ ಆರೋಗ್ಯ ಇಲಾಖೆಯ ವತಿಯಿಂದ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಆರೋಗ್ಯ ಶಿಬಿರದಲ್ಲಿ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ಮಕ್ಕಳಿಗೆ ವಿವಿಧ ಆರೋಗ್ಯ ತಪಾಸಣೆ ಕೈಗೊಂಡರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.