ಅ.10ರಂದು ಉಚಿತ ಆರೊಗ್ಯ ತಪಾಸಣಾ ಶಿಬಿರ
ಅ.10ರಂದು ಉಚಿತ ಆರೊಗ್ಯ ತಪಾಸಣಾ ಶಿಬಿರ
ಕಂಪ್ಲಿ 08: ಡಾ.ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ಕಂಪ್ಲಿ ನೇತೃತ್ವದೊಂದಿಗೆ ಹಾಗೂ ಬೆಂಗಳೂರು ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಅ.10ರ ಭಾನುವಾರದಂದು ಉಚಿತ ಆರೊಗ್ಯ ತಪಾಸಣಾ ಶಿಬಿರ ಕಂಪ್ಲಿ ನಗರದ ಭಾರತೀಯ ಶಿಶು ವಿದ್ಯಾಲಯ ಆವರಣದಲ್ಲಿ ಜರುಗಲಿದ್ದು, ಜನರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಾ.ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ಕಂಪ್ಲಿ ತಾಲೂಕು ಅಧ್ಯಕ್ಷ ಅಕ್ಕಿ ಜಿಲಾನ್ ತಿಳಿಸಿದರು. ಅವರು ಗುರುವಾರ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಹೃದಯ ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲು ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ವಿವಿಧ ನುರಿತ ತಜ್ಞರು ಆಗಮಿಸುತ್ತಿದ್ದು, ಜನರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಕಡೆ ಗಮನಹರಿಸಬೇಕು. ಜನರು ಆರೋಗ್ಯ ತಪಾಸಣೆಗಾಗಿ ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು ಎಂದರು.
ಹೆಚ್ಚಿನ ಮಾಹಿತಿಗಾಗಿ ಜಿಲಾನ್(ದೂ.ಸಂ-9480726561), ಆರ್.ಜಿಲಾನ್(7829967704) ಸಂಪರ್ಕಿಸಲು ಕೋರಲಾಗಿದೆ. ಈ ಸಂದರ್ಭದಲ್ಲಿ ಟ್ರಸ್ಟ್ ಸದಸ್ಯರಾದ ಡಾ.ಅಬ್ದುಲ್ ಗೌಸ್, ಯು.ಜಿಲಾನ್, ಬಡಿಗೇರ್ ಜಿಲಾನ್‌ಸಾಬ್, ಎ.ಸಿ.ಯಲ್ಲಪ್ಪ, ಆರ್.ಸುಭಾನ್ ಇದ್ದರು.
ಅ.003: ಪಾಸ್ ಪೋಟೋ: ಅಕ್ಕಿ ಜಿಲಾನ್.