ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಉಚಿತ ಹೆಲ್ಮೆಟ್ ವಿತರಣೆ
Free helmet distribution to Home Guard personnel
ಕಂಪ್ಲಿ 26: ಭಾರತದಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಪ್ರತಿಯೊಬ್ಬ ವಾಹನ ಚಾಲಕ ಹೆಲ್ಮೆಟ್ ಧರಿಸಿ ತಮ್ಮ ಪ್ರಾಣ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಪಿಐ ಕೆ.ಬಿ.ವಾಸುಕುಮಾರ ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಅವರಣದಲ್ಲಿ ಗೃಹ ರಕ್ಷಕದಳದ ಸಿಬ್ಬಂದಿಗಳಿಗೆ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ನೇತೃತ್ವದಲ್ಲಿ ಉಚಿತವಾಗಿ ಹೆಲ್ಮೆಟ್ ವಿತರಿಸಿದರು ನಂತರ ಕೆ.ಬಿ.ವಾಸುಕುಮಾರ ಮಾನತಾಡಿ, ಬೈಕ್ ಸವಾರರು ಕಡ್ಡಾಯ ಹೆಲ್ಮಟ್ ಧರಿಸಿ ಸವಾರಿ ಮಾಡಬೇಕು. ಇದರಿಂದ ತಮ್ಮ ಅಮೂಲ್ಯ ಜೀವ ಉಳಿಸಿಕೊಳ್ಳಲು ಸಾಧ್ಯವಾಗುವುದರ ಜೋತೆಗೆ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗುತ್ತದೆ. ಅತಿ ಹೆಚ್ಚಾಗಿ ಹೆಲ್ಮೆಟ್ ಇಲ್ಲದೇ ಅಪಘಾತದಲ್ಲಿ ಅನೇಕ ಜನರು ಜೀವ ಬಿಟ್ಟಿದ್ದಾರೆ. ಆದ್ದರಿಂದ ಯುವಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಉಳಿಸಿಕೊಳ್ಳಬೇಕು ಎಂದರು.
ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಮಾತನಾಡಿ, ವಾಹನ ಚಲಾವಣೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಚಾಲನೆ ಮಾಡಬೇಕು. ಅಂದಾಗ ಅಪರಾಧಗಳು ಕಡಿಮೆ ಆಗಲು ಸಾಧ್ಯ. ಚಿಕ್ಕ ಮಕ್ಕಳಿಗೆ ವಾಹನ ಚಲಾಯಿಸಲು ಕೊಡಬೇಡಿ, ಲೈಸೆನ್ಸ್ ಇಲ್ಲದೇ ವಾಹನ ಚಲಾವಣೆ ಮಾಡುವುದು ಕಾನೂನು ಬಾಹಿರವಾಗಿದ್ದು, ಕಾನೂನನ್ನು ಪಾಲಿಸುವುದು ಎಲ್ಲರ ಕರ್ತವ್ಯ. ಹೆಲ್ಮೆಟ್ ಧರಿಸುವುದು ಚಾಲಕರ ಹಿತದೃಷ್ಟಿಯಿಂದ ಉತ್ತಮ. ಹೆಚ್ಚಿನ ಅಪಘಾತ ಸಂದರ್ಭದಲಿ ್ಲಚಾಲಕರು ತಲೆಗೆ ಪೆಟ್ಟು ಬಿದ್ದು ಅಸುನಿಗಿದ್ದು ಹೆಚ್ಚು. ಅದಕ್ಕಾಗಿ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಬೇಕು ಎಂದರು.ಇಲ್ಲಿನ ಒಟ್ಟು 75 ಜನ ಗೃಹ ರಕ್ಷಕದಳದ ಸಿಬ್ಬಂದಿಗಳಿಗೆ ಹೆಲ್ಮೆಟ್ ವಿತರಿಸಿದರು. ಈ ಸಂದರ್ಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪುರಸಭೆ ಸದಸ್ಯ ಲೊಡ್ಡು ಹೊನ್ನೂರವಲಿ, ಮುಖಂಡ ಪೇಂಟರ್ ಮಸ್ತಾನ್, ಜಿಲ್ಲಾ ಸಮಾಧೀಷ್ಟರಾದ ಎಮ್ಮಿಗನೂರು ಶೇಕ್ ಸಾಬ್, ಗೃಹ ರಕ್ಷಕದಳ ಪ್ರಭಾರಿ ಘಟಕಾಧಿಕಾರಿ ಹೊನ್ನೂರವಲಿ, ಪಿಎಲ್‌ಸಿ ಘಟಕಾಧಿಕಾರಿ ಹೆಚ್.ಗಿರಿಧರ್, ಸೆಕ್ಷನ್ ಲೀಡರ್ ಗಳಾದ ಕೆ.ಜಗದೀಶ, ಬಿ.ಚಂದ್ರಶೇಖರ, ಎಎಸ್ ಎಲ್ ಗಳಾದ ಎ.ನಾರಾಯಣ ಸೇರಿದಂತೆ ಸಿಬ್ಬಂದಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 