ಲೋಕದರ್ಶನವರದಿ
ಬ್ಯಾಡಗಿ25: ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಥರ್ಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗುವ ಉದ್ದೇಶದಿಂದ ರಾಜ್ಯ ಸಕರ್ಾರ ಅವರಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸುತ್ತಿದೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಮಂಗಳವಾರ ತಾಲೂಕಿನ ಚಿಕ್ಕಬಾಸೂರ ಗ್ರಾಮದ ಸರಕಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿಎ ಮತ್ತು ಬಿಕಾಂ ವಿದ್ಯಾಥರ್ಿಗಳಿಗೆ ಉಚಿತ ಲ್ಯಾಪಟಾಪ್ ವಿತರಿಸಿ ಮಾತನಾಡಿದ ಅವರು ಸರಕಾರದ ಈ ಯೋಜನೆಯ ಸದುಪಯೋಗವನ್ನು ಪದವಿ ವಿದ್ಯಾಥರ್ಿಗಳು ಪಡೆದುಕೊಂಡು ತಮ್ಮ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ವೀರಭದ್ರಪ್ಪ ಗೊಡಚಿ, ಜಗದೀಶ ಕಣಗಲಬಾವಿ, ಎಪಿಎಂಸಿ ಸದಸ್ಯ ಶಿವಪ್ಪ ಕುಮ್ಮೂರ, ರುದ್ರಪ್ಪ ಹೊಂಕಣದ, ಪ್ರಾಚಾರ್ಯ ಪಾಟೀಲ, ಶಾಸಕರ ಆಪ್ತ ಸಹಾಯಕ ಬಸವರಾಜ ಕುಲಕಣರ್ಿ, ಮತ್ತು ಕಾಲೇಜಿನ ಸಿಬ್ಬಂದಿಯವರು ಉಪಸ್ಥಿತರಿದ್ದರು.