ಇಂದು ಕೆ.ಎಲ್. ಇ ಪಾಲಿಕ್ಲಿನಿಕನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ
ಶಿಗ್ಗಾವಿ 27: ಕೆ.ಎಲ್.ಇ. ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹುಬ್ಬಳ್ಳಿ. ಕೆ.ಎಲ್.ಇ. ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಗಬ್ಬೂರ, ಇವರ ಸಂಯುಕ್ತ ಆಶ್ರಯದಲ್ಲಿ ಶಿಗ್ಗಾಂವಿ ಪಟ್ಟಣದಲ್ಲಿ ಹೊಸ ಬಸ್ ನಿಲ್ದಾಣ ಪಕ್ಕದಲ್ಲಿ ನೂತನವಾಗಿ ಪ್ರಾರಂಭವಾದ ಕೆಎ??? ಸ್ಪೆಷಲಿಸ್ಟ್ ಸ್ಟಾಟಲೈಟ್ ಪಾಲಿಕ್ಲಿನಿಕ್ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಮಾ.28 ಶುಕ್ರವಾರ ಬೆಳಿಗ್ಗೆ 10 ರಿಂದ ಸಂಜೆ 4 ರ ವರೆಗೆ ನಡೆಯಲಿದೆ ಎಂದು ಹುಬ್ಬಳ್ಳಿಯ ಕೆಎ???. ಜೆಜಿ ಎಂಎಂಸಿ ಪ್ರಾಂಶುಪಾಲ ಡಾ. ಎಮ್ ಜಿ ಹಿರೇಮಠ ಹೇಳಿದರು.ಶಿಗ್ಗಾವಿ ಪಟ್ಟಣದಲ್ಲಿ ಹೊಸದಾಗಿ ಪ್ರಾರಂಭವಾದ ಕೆಎ??? ಸ್ಪೆಷಲಿಸ್ಟ್ ಸ್ಟಾಟಲೈಟ್ ಪಾಲಿಕ್ಲಿನಿಕ್ ಆಸ್ಪತ್ರೆಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ತಿಳಿಸಿದವರು. ಮಾ.28 ರಂದು ನಡೆಯುವ ಉಚಿತ ವೈದ್ಯಕೀಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಕೆಎ??? ಚೇರ್ಮನ್ ಡಾ. ಪ್ರಭಾಕರ್ ಕೋರೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಂಕ್ರಣ್ಣ ಮುನವಳ್ಳಿ, ಡಾ. ಪ್ರೊ. ನಿತಿನ್ ಗಂಗಾನೆ, ಡಾ.ಪ್ರೊ.ವಿಡಿ ಪಾಟೀಲ ಆಗಮಿಸಲಿದ್ದಾರೆ ಎಂದರು.
ಹುಬ್ಬಳ್ಳಿಯ ಗಬ್ಬೂರ ಹತ್ತಿರ ನೂತನವಾಗಿ ಪ್ರಾರಂಭವಾದ ಕೆ.ಎಲ್.ಇ. ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರಿಂದ ಮುಂದಿನ ಎರಡು ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದ್ದು, ಉದ್ಘಾಟನೆಗೂ ಪೂರ್ವದಲ್ಲಿಯೇ ಜನವರಿ ತಿಂಗಳಿನಿಂದಲೇ ನಿರಂತರವಾಗಿ, ಅಲ್ಲಿ ಉಚಿತ ಆರೋಗ್ಯ ತಪಾಸಣಾ ನಡೆಸುತ್ತಿದ್ದು, ಈ ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಭಾಗದಲ್ಲಿ ಜನರ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಿಗ್ಗಾವಿ ಪಟ್ಟಣದಲ್ಲಿ ಹೊಸದಾಗಿ ಕೆಎ??? ಸ್ಪೆಷಲಿಸ್ಟ್ ಸ್ಟಾಟಲೈಟ್ ಪಾಲಿಕ್ಲಿನಿಕ್ ತಿಳಿಯಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಉಚಿತವಾಗಿ ವಾರದ ಐದು ದಿನಗಳ ಕಾಲ ವೈದ್ಯಕೀಯ ಸೇವೆ ನಡೆಯಲಿದ್ದು ಸೋಮವಾರ ಮತ್ತು ಗುರುವಾರ ಸಾಮಾನ್ಯ ಆರೋಗ್ಯ ತಪಾಸಣೆ. ಸಾಮಾನ್ಯ ಶಸ್ತ್ರ ಚಿಕಿತ್ಸೆ ತಪಾಸಣೆ ನಡೆಯಲಿದೆ. ಮಂಗಳವಾರ ಚಿಕ್ಕ ಮಕ್ಕಳ ತಪಾಸಣೆ. ಚರ್ಮರೋಗ ಮಾನಸಿಕ ರೋಗಿಗಳ ತಪಾಸಣೆ ನಡೆಯಲಿದೆ. ಬುಧವಾರ ಪ್ರಸೂತಿ ಮತ್ತು ಸ್ತ್ರೀ ರೋಗ, ಎಲುಬು ಮತ್ತು ಕೀಲುಗಳ ತಪಾಸಣೆ. ಫಿಸಿಯೋಥೆರಪಿ, ಹೃದಯ ರೋಗ ತಪಾಸಣೆ. ಶುಕ್ರವಾರ ಕಣ್ಣು, ಕಿವಿ, ಮೂಗು, ಗಂಟಲು, ದಂತ ತಪಾಸಣೆ ನಡೆಯಲಿದೆ. ಪ್ರತಿದಿನವೂ ಹುಬ್ಬಳ್ಳಿಯ ಕೆಎ??? ವೈದ್ಯಕೀಯ ಸಂಸ್ಥೆಯ ತಜ್ಞ ವೈದ್ಯರ ತಂಡ ತಪಾಸಣೆಗೆ ಬರಲಿದ್ದು, ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಉಚಿತವಾಗಿ ಆರೋಗ್ಯ ತಪಾಸನೆ ನಡೆಯಲಿದೆ. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಬಿದ್ದಲ್ಲಿ ಸಂಸ್ಥೆಯ ವಾಹನಗಳ ಮೂಲಕವೇ ಹುಬ್ಬಳ್ಳಿಯ ಗಬ್ಬೂರ ಹತ್ತಿರ ಇರುವ ಕೆ.ಎಲ್.ಇ. ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಉಚಿತವಾಗಿ ಸೇವೆ ಒದಗಿಸಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಗ್ಗಾಂವಿ ಕೆಎ??? ಸ್ಪೆಷಲಿಸ್ಟ್ ಸ್ಟಾಟಲೈಟ್ ಪಾಲಿಕ್ಲಿನಿಕ್ ಆಡಳಿತಾಧಿಕಾರಿ ಬಸವರಾಜ ಸಜ್ಜನ ಇದ್ದರು.