ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ
Free mushroom farming training for women
ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ
ಬಳ್ಳಾರಿ 05: ಮಹಿಳೆಯರು ಬಿಡುವಿನ ಸಮಯದಲ್ಲಿ ತಮ್ಮ ಮನೆಗಳಲ್ಲಿ ಅಣಬೆ ಬೇಸಾಯ ಮಾಡಬಹುದಾಗಿದ್ದು, ಇದರಿಂದ ತಮ್ಮ ಕುಟುಂಬ ನಿರ್ವಹಣೆಗೆ ಆರ್ಥಿಕ ವೃದ್ಧಿಯಾಗುವುದು ಎಂದು ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಅವರು ಹೇಳಿದರು. ಶನಿವಾರ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ರಚಿಸಿರುವ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮಹಿಳೆಯರಿಗೆ ಆಯೋಜಿಸಿದ್ದ 10 ದಿನಗಳ ಉಚಿತ ಅಣಬೆ ಬೇಸಾಯ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಗ್ರಾಮ ಪಂಚಾಯತ್ ಒಕ್ಕೂಟಗಳಿಂದ ನಿರ್ವಹಿಸುತ್ತಿರುವ ಘನ ತ್ಯಾಜ ನಿರ್ವಹಣಾ ಘಟಕಗಳ ವಾಹನ ಚಾಲನಾ ತರಬೇತಿ ಪಡೆದ ಸ್ವ- ಸಹಾಯ ಗುಂಪಿನ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸಗಳನ್ನು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಯೋಜನಾ ನಿರ್ದೇಶಕ ವಿನೋದ್, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೆಸಾಬ್ ಎಚ್.ಎರಿಮನಿ, ಜಿಪಂ ನ ಸಂಪನ್ಮೂಲ ವ್ಯಕ್ತಿ ರಾಮಚಂದ್ರ ರಾಜಾಪೂರ, ಎನ್‌ಆರ್‌ಎಲ್‌ಎಂ ನ ಸಿಬ್ಬಂದಿಗಳಾದ ರಾಜೇಂದ್ರ, ವಿಜಯ ಕುಮಾರ, ರಘುವರ್ಮ, ಉಪನ್ಯಾಸಕಾರದ ಜಡೇಪ್ಪ, ದಿನೇಶ, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ ಸಿರುಗುಪ್ಪ ತಾಲ್ಲೂಕಿನ 55 ಜನ ಶಿಭಿರಾರ್ಥಿಗಳು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 