ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ
Free note book and study material distribution program for students
ಹೊಸಪೇಟೆ 10: ರಂದು ಭುವನೇಶ್ವರಿ ಸ್ಪಂದನ ಮಹಿಳಾ ಟ್ರಸ್ಟ್ ಹೊಸಪೇಟೆ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 88-ಮುದ್ಲಾಪುರ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿಯನ್ನು ವಿದ್ಯಾರ್ಥಿಗಳಿಗೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭುವನೇಶ್ವರಿ ಮಹಿಳಾ ಸ್ಪಂದನ ಟ್ರಸ್ಟ್‌ನ ಅಧ್ಯಕ್ಷರಾದ ಅಂಜಲಿ ರವರು ಮಾತನಾಡಿ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಮಕ್ಕಳ ಉತ್ತಮ ಭವಿಷ್ಯ ರೂಪುಗೊಳ್ಳುವುದು ಶಾಲಾ ಹಂತದಲ್ಲಿಯೇ ಆಗಿದೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಪ್ರತಿಭಾವಂತರು ಸೃಜನಶೀಲ ವಿದ್ಯಾರ್ಥಿಗಳೂ ಇರುತ್ತಾರೆ. ಇವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ನಮ್ಮ ಟ್ರಸ್ಟ್‌ನ ವತಿಯಿಂದ ಪ್ರತಿ ವರ್ಷ ಸರ್ಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿಗಳನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳೂ ಇವುಗಳನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ಶಾಲೆಗೆ, ಊರಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ಬಸವರಾಜ.ಕೆ ರವರು ಮಾತನಾಡಿ ನಮ್ಮ ಶಾಲೆಯ ಮಕ್ಕಳು ಅತ್ಯಂತ ಪ್ರತಿಭಾವಂತರಿದ್ದು, ಮನೆಯಲ್ಲಿ ಅಷ್ಟೊಂದು ಸೌಲಭ್ಯಗಳೂ ಇರುವುದಿಲ್ಲ. ಇಂತಹ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ಭುವನೇಶ್ವರಿ ಸ್ಪಂದನ ಮಹಿಳಾ ಟ್ರಸ್ಟ್‌ನ ವತಿಯಿಂದ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ. ಅಧ್ಯಕ್ಷರಾದ ಶ್ರೀಮತಿ ಅಂಜಲಿ ಮೇಡಂ ಅವರು ಅಂತರ್ ರಾಷ್ಟ್ರೀಯ ಮಟ್ಟದ ಕಲಾವಿದರಾಗಿದ್ದು, ಇವರ ಕಲಾಕೇಂದ್ರದಿಂದ ಮಕ್ಕಳು ಹಂಪಿ ಉತ್ಸವ, ದಸರಾ ಉತ್ಸವ, ಹೀಗೆ ನಾಡಿನ ವಿವಿಧ ಕಾರ್ಯಕ್ರಮಗಳಲ್ಲಿ ಉತ್ತಮ ಭರತನಾಟ್ಯ ಪ್ರದರ್ಶನ ನೀಡಿ ಹೊಸಪೇಟೆಗೆ ಕೀರ್ತಿ ತಂದಿರುವುದು ಶ್ಲಾಘನೀಯವಾಗಿದೆ. ಟ್ರಸ್ಟ್‌ನಿಂದ ಇಂತಹ ಸಾಮಾಜಿಕ ಕಾರ್ಯಗಳು ಹೆಚ್ಚುವಂತಾಗಲಿ ಎಂದು ಶುಭಹಾರೈಸಿ ಮಕ್ಕಳೂ ದಿನನಿತ್ಯ ಶಾಲೆಗೆ ಹಾಜರಾಗಿ ಉತ್ತಮ ವಿದ್ಯಾಭ್ಯಾಸ ಮಾಡುವುದರ ಮೂಲಕ ಉತ್ತಮ ನಾಗರೀಕರಾಗಿ ರೂಪುಗೊಳ್ಳಬೇಕೆಂದು ತಿಳಿಸಿದರು. ಟ್ರಸ್ಟ್‌ನ ಅಧ್ಯಕ್ಷರಾದ ಅಂಜಲಿ ಮೇಡಂ ಅವರನ್ನು ಶಾಲಾ ಪರವಾಗಿ ಅಭಿನಂದಿಸಲಾಯಿತು. ನಂತರ ಟ್ರಸ್ಟ್‌ನ ವತಿಯಿಂದ ಮುಖ್ಯಗುರುಗಳಾದ ಬಸವರಾಜ.ಕೆ, ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪರಶುರಾಮ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪರಶುರಾಮ, ಶಿಕ್ಷಕರಾದ ರಮೇಶ್, ರಾಧ, ಪಾರ್ವತಿ, ಟ್ರಸ್ಟ್‌ನ ಸದಸ್ಯರುಗಳಾದ ರೇಣುಕಾ, ಸುಮಾ, ಅರ್ಚನ, ರೇಷ್ಮಾ, ಗೌರಿ, ಶಿವಗಂಗ, ಚಂದ್ರಕಲಾ, ಲಕ್ಷ್ಮೀ ಮುಂತಾದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ರಮೇಶ್ ಶಿಕ್ಷಕರು ನಿರೂಪಿಸಿದರು, ಬಸವರಾಜ್ ಮುಖ್ಯ ಶಿಕ್ಷಕರು ಸ್ವಾಗತಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 