ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್, ಪೆನ್, ಪೆನ್ಸಿಲ್ ವಿತರಣೆ
Free notebooks, pens, pencils distributed to children
ಕಂಪ್ಲಿ 26: ಕಂಪ್ಲಿ-ಕೋಟೆಯ 1ನೇ ವಾರ್ಡಿನ ತುಂಗಭದ್ರ ನದಿ ಸೇತುವೆ ಬಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಲಿ ಶಾಸಕ ಜೆ.ಎನ್.ಗಣೇಶ ಅವರ ಆಪ್ತ ಸಹಾಯಕ ಧನರಾಜ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್, ಪೆನ್ನು, ಪೆನ್ಸಿಲ್ ವಿತರಿಸಿದರು.
ನಂತರ ಯುವ ಮುಖಂಡ ಎಸ್.ರುದ್ರಮುನಿ ಮಾತನಾಡಿ, ಇತ್ತೀಚಿನ ದಿನಮಾನದಲ್ಲಿ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗುತ್ತಿರುವುದು ವಿಪರ್ಯಾಸವಾಗಿದೆ. ಸರ್ಕಾರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಜೊತೆಗೆ ಸಾಕಷ್ಟು ಸೌಲಭ್ಯಗಳು ದೊರಕಲಿವೆ. ಇಲ್ಲಿನ ಶಾಲೆಯಲ್ಲಿ ಶಿಕ್ಷಕ ವೃಂದದವರು ಮಕ್ಕಳ ಭವಿಷ್ಯ ರೂಪಿಸಲು ಶ್ರಮಿಸುತ್ತಿದ್ದಾರೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗಳತ್ತ ಮುಖ ಮಾಡುವ ಜೊತೆಗೆ ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಇಲ್ಲಿನ ಶಾಲೆಯಲ್ಲಿ 46 ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಾಗ್ರಿಗಳನ್ನು ವಿತರಿಸಿದ್ದು, ಇದರ ಸದುಪಯೋಗದೊಂದಿಗೆ ಮಕ್ಕಳು ಶಿಕ್ಷಣವಂತರಾಗಬೇಕು. ಶಾಸಕರ ಆಪ್ತ ಸಹಾಯಕ ಧನರಾಜ್ ಇವರು ಸಮಾಜಮುಖಿ ಕಾರ್ಯ ಮಾಡುವ ಮೂಲಕ ಜನರೊಂದಿಗೆ ಒಳ್ಳೆಯ ಸಂಪರ್ಕ ಬೆಳೆಸಿಕೊಂಡಿದ್ದು, ಇನ್ನೂ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದರು.
ಈ ಸಂದರ್ಭದಲ್ಲಿ ಮುಖ್ಯಗುರು ಹೊಸಗೇರ್ಪ, ಸಹ ಶಿಕ್ಷಕರಾದ ಚಂದ್ರಶೇಖರ್ ಶೆಟ್ರು, ಸುನೀತಾ, ಎಸ್.ಭವ್ಯ, ಯುವಕರಾದ ವಾಸುಕುಮಾರ, ಮಕ್ಬುಲ್, ಮಲ್ಲಿಕಾರ್ಜುನ, ಗಜೇಂದ್ರ, ರಾಘವೇಂದ್ರ, ರವಿ ಸೇರಿದಂತೆ ಮಕ್ಕಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 