ದಾಸನಾಳ ಕೆ.ಎಚ್.ಪಿ.ಎಸ್ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಅಭ್ಯಾಸ ಪುಸ್ತಕ ವಿತರಣೆ
Free practice books distributed to children at Dasana KHPS School
ಯರಗಟ್ಟಿ : ತಾಲೂಕಿನ ದಾಸನಾಳ ಗ್ರಾಮದ ಕೆ.ಎಚ್.ಪಿ.ಎಸ್ ಶಾಲೆಯಲ್ಲಿ ಮಕ್ಕಳ ಶಿಕ್ಷಣಾಭಿವೃದ್ಧಿಗೆ ಮಾದರಿಯಾದ ಕಾರ್ಯ ನಡೆದಿದೆ. 1ರಿಂದ 5ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆಯ ಅವಧಿಯಲ್ಲಿ ಅಭ್ಯಾಸ ನಿರಂತರವಾಗಿರಲೆಂದು ಶಾಲೆಯ ಎಲ್ಲಾ ಶಿಕ್ಷಕರು ಒಗ್ಗೂಡಿ ತಮ್ಮ ಸ್ವಂತ ಖರ್ಚಿನಲ್ಲಿ 45 ಪುಟಗಳ ಮನೆಗಲಸದ ಅಭ್ಯಾಸ ಪುಸ್ತಕಗಳನ್ನು ಸಿದ್ಧಪಡಿಸಿ ಎಲ್ಲ ವಿದ್ಯಾರ್ಥಿಗಳಿಗೆ ವಿತರಿಸಿದರು.ಇದೇ ವೇಳೆ, ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಒದಗಿಸಲಾದ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೂ ಬೇಸಿಗೆ ರಜೆಯ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಯಿತು. ಈ ಕಾರ್ಯದಿಂದ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಮೇಲಿನ ಆಸಕ್ತಿ ಹೆಚ್ಚಿಸಲು ಹಾಗೂ ರಜೆ ಸಮಯವನ್ನು ಸದ್ಬಳಕೆ ಮಾಡಿಕೊಳ್ಳಲು ಸಹಕಾರಿಯಾಗಲಿದೆ.ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಮಹದೇವ ಶಿಂತ್ರಿ, ಸದಸ್ಯರಾದ ಪತ್ರೆಪ್ಪ ಬಳಿಗಾರ, ಪ್ರಧಾನ ಗುರುಗಳಾದ ಜಿ. ಎಸ್. ನೆಲಗುಡ್ಡ, ಶಿಕ್ಷಕರಾದ ಎಸ್. ಬಿ. ಬಾಳೋಜಿ, ವಿದ್ಯಾ ಅಂಗಡಿ, ಲಕ್ಷ್ಮೀ ಕುರುಬೇಟ, ಲಕ್ಷ್ಮಣ ತಳವಾರ ಹಾಗೂ ಶಾಲೆಯ ಮುದ್ದು ಮಕ್ಕಳು ಉಪಸ್ಥಿತರಿದ್ದರು.ಹೇಳಿಕೆ: ಎ ಎ ಖಾಜಿ ಕ್ಷೇತ್ರ ಶಿಕ್ಷಣಾಧಿಕಾರಿ ಸವದತ್ತಿ“ದಾಸನಾಳ ಕೆ.ಎಚ್.ಪಿ.ಎಸ್ ಶಾಲೆಯ ಶಿಕ್ಷಕರು ತಮ್ಮ ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗಾಗಿ ಅಭ್ಯಾಸ ಪುಸ್ತಕಗಳನ್ನು ಸಿದ್ಧಪಡಿಸಿ ವಿತರಿಸಿರುವುದು ಅತ್ಯಂತ ಶ್ಲಾಘನೀಯ. ಇಂತಹ ಕಾರ್ಯಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಶಿಕ್ಷಣದಿಂದ ದೂರವಾಗದಂತೆ ನೋಡಿಕೊಳ್ಳುತ್ತಿರುವುದು ಇತರ ಶಾಲೆಗಳಿಗೆ ಮಾದರಿಯಾಗಿದೆ. ಎಲ್ಲಾ ಶಿಕ್ಷಕರಿಗೂ ನನ್ನ ಅಭಿನಂದನೆಗಳು.”
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 