ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ - ಶಾಸಕ ಕೃಷ್ಣ ನಾಯಕ
Free textbook distribution to students - MLA Krishna Nayak
ಲೋಕದರ್ಶನ ವರದಿ
ಹೂವಿನಹಡಗಲಿ 25: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಮಹತ್ವದ ಕ್ರಮವಾಗಿ ಸರ್ಕಾರ ಮೊದಲ ಬಾರಿಗೆ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಆರಂಭಿಸಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಎಲ್ ಕೃಷ್ಣನಾಯಕ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಪಠ್ಯಪುಸ್ತಕ ವಿತರಿಸಿ ಮಾತನಾಡಿದರು. ಕಾಲೇಜಿನ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಕೊಟ್ರಗೌಡ ಅಯ್ಯನಗೌಡ್ರ ಮಾತನಾಡಿ ಪ್ರಸಕ್ತ ಶೈಕ್ಷಣಿಕ ವರ್ಷ ಕಂಪ್ಯೂಟರ್ ಸೈನ್ಸ್ ಜತೆಗೆಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಆಧುನಿಕ ತಾಂತ್ರಿಕ ಶಿಕ್ಷಣದ ಅವಕಾಶ ಕಲ್ಪಿಸಲಾಗಿದೆ ಎಂದರು. ಉಪನ್ಯಾಸಕರಾದ ಬಸೆಟ್ಟಿ ಪ್ರಕಾಶ್, ಶಿವಕುಮಾರ್, ದುಷ್ಯಂತ, ಶ್ರೀಕಾಂತ್, ಆರತಿ, ಶಂಕರ್, ಪರಂಜ್ಯೋತಿ, ಉಮಾ ಹಾಗೂ ರಶ್ಮಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಅಧಿಕಾರಿಗಳಾದ ವೀರೇಶ್ ಹಾಗೂ ಮಂಜುನಾಥ್ ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 