ಆಟೋ ಚಾಲಕರಿಗೆ ಉಚಿತ ಸಮವಸ್ತ್ರ ವಿತರಣೆ
Free uniform distribution for auto-rickshaw drivers
ಲೋಕದರ್ಶನ ವರದಿ
ಕಂಪ್ಲಿ, ಆ.06: ಪಟ್ಟಣದ ಅಂಬೇಡ್ಕರ್ ವೃತ್ತ ಹಾಗೂ ಬಳ್ಳಾರಿ ರಸ್ತೆ ಖಾಸಗಿ ಬಸ್ ನಿಲ್ದಾಣದ ಬಳಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ ಅವರ ಜನ್ಮದಿನದ ಪ್ರಯುಕ್ತ ಆಟೋ ಚಾಲಕರಿಗೆ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆಟೋ ಚಾಲಕ ಸುರೇಶ್, ಬಿಜೆಪಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ ಅವರು ಆಟೋ ಚಾಲಕರಿಗೆ ಉಚಿತ ಸಮವಸ್ತ್ರ ನೀಡುವ ಮೂಲಕ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಇನ್ನಷ್ಟು ಶಕ್ತಿ ದೊರೆಯಲಿ ಹಾಗೂ ಉನ್ನತ ಸ್ಥಾನಮಾನ ಲಭಿಸಲಿ ಎಂದು ಶುಭ ಹಾರೈಸಿದರು.
ಬಳಿಕ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಿ.ಡಿ. ಮಹಾದೇವ ಅವರ ಜನ್ಮದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖಂಡರಾದ ಮೆಟ್ರಿ ಶಿವಕುಮಾರ್, ನಾಗಲಿಂಗ, ಮಹಾಂತೇಶ್, ಜಡೆಪ್ಪ, ಆನಂದ, ಪುನೀತ್, ಆಟೋ ಚಾಲಕರಾದ ಸುರೇಶ್, ಅನೀಫ್, ಮೈಲಾರಿ, ನಾಗರಾಜ್, ವೆಂಕಟೇಶ್, ಕಾರ್ತಿಕ್, ಭಾರ್ಗವ, ಶಿವು, ನಾಗಲಿಂಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 