ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಕಚೇರಿಯಲ್ಲಿ ಉಚಿತ ಯೋಗ ಶಿಬಿರ ಆಯೋಜನೆ
Free yoga camp organized at Karnataka Bala Vikas Academy office
ಲೋಕದರ್ಶನ ವರದಿ
ಧಾರವಾಡ 07: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಕಚೇರಿಯಲ್ಲಿ ಉಚಿತ ಯೋಗ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಇಂದು (ಏ.07) ಹಮ್ಮಿಕೊಳ್ಳಲಾಗಿತ್ತು. ಶಿಬಿರವನ್ನು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಅಡವೇಶ್ ಇಟಗಿ ಅವರು ಉದ್ಘಾಟಿಸಿ, ಮಾತನಾಡಿ, ಬೇಸಿಗೆ ಇರುವುದರಿಂದ ಮಕ್ಕಳು ಒಳಾಂಗಣ ಆಟಗಳನ್ನು ಆಡಬೇಕು. ಸರಿಯಾಗಿ ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಜಾಸ್ತಿ ನೀರನ್ನು ಕುಡಿಯಬೇಕು. ಗಿಡ ಹತ್ತುವುದು, ಕೆರೆಗಳಿಂದ ದೂರ ಇರುವುದು, ಮೊಬೈಲ್ ಬಳಕೆ ಮಾಡದೇ ಇರುವುದು, ಮಕ್ಕಳು ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು. ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಆಪ್ತ ಕಾರ್ಯದರ್ಶಿ ಅನ್ನಪೂರ್ಣ ಸಂಗಳದ ಮಾತನಾಡಿ ಯೋಗ ಶಿಬಿರದ ಕುರಿತು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಶಿಬರದಲ್ಲಿ ಹುಬ್ಬಳ್ಳಿ ಧಾರವಾಡದ ಮಕ್ಕಳು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 