ಮೊಬೈಲ್ ವಿಚಾರಕ್ಕೆ ದೇವಸ್ಥಾನದಲ್ಲೇ ಸ್ನೇಹಿತನ ಕೊಲೆ
Friend murdered inside temple over a mobile phone issue
ಲೋಕದರ್ಶನ ವರದಿ
ಯರಗಟ್ಟಿ 18 : ಮೊಬೈಲ್ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಉಂಟಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕಬುದನೂರ ಗ್ರಾಮದ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಫಕೀರ್ಪ ಪೆಡ್ಡೆನ್ನವರ (40) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ ಶುಕ್ರವಾರ ಸಂಜೆ ಲಕ್ಷ್ಮೀ ದೇವಸ್ಥಾನದಲ್ಲಿ ಫಕೀರ್ಪ ಮಲಗಿದ್ದ ವೇಳೆ ಸ್ನೇಹಿತ ಮಲ್ಲಿಕಾರ್ಜುನ ಪೂಜೇರೆ ಅಲ್ಲಿಗೆ ಬಂದು ತನ್ನ ಮೊಬೈಲ್ನ್ನು ಹಿಂತಿರುಗಿಸುವಂತೆ ಕೇಳಿದ್ದಾನೆ. ಆದರೆ ಫಕೀರ್ಪ “ರಾತ್ರಿ ಕೊಡುತ್ತೇನೆ” ಎಂದು ಹೇಳಿದ್ದರಿಂದ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಆಕ್ರೋಶಗೊಂಡ ಮಲ್ಲಿಕಾರ್ಜುನ ದೇವಸ್ಥಾನದಲ್ಲಿದ್ದ ಕರ್ೂರ ಹಚ್ಚುವ ಕಲ್ಲನ್ನು ಎತ್ತಿ ಫಕೀರ್ಪನ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡ ಫಕೀರ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುರಗೋಡ ಪೊಲೀಸ್ ಠಾಣೆಯ ಸಿಪಿಐ ಐ. ಎಂ. ಮಠಪತಿ, ಪಿಎಸ್ಐ ಡಬ್ಲೂ. ಎಚ್. ಯಾದವಾಡ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 