ಸ್ನೇಹ ಸಮ್ಮೇಳನ; ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ರೂಢಿಸಿ ಯಶಸ್ಸಿಯಾಗಬೇಕು
Friendship Conference; Students should cultivate positive thinking and achieve success
ಲೋಕದರ್ಶನ ವರದಿ
ಕಾಗವಾಡ 21: ಯುವಕರು ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ದಿಗೂ ಹೆಚ್ಚಿನ ಮಹತ್ವ ನೀಡುತ್ತ, ಸಮಯದ ಸದುಪಯೋಗ, ಕಠಿಣ ಪರಿಶ್ರಮ ಮತ್ತು ಸಕಾರಾತ್ಮಕ ಚಿಂತನೆಯೊಂದಿಗೆ ಯಶಸ್ಸಿನ ಮೂಲಮಂತ್ರಗಳನ್ನು ಕಲಿತುಕೊಳ್ಳಬೇಕೆಂದು ಬೆಳಗಾವಿ ಮಾಣಿಕಬಾಗ್ ಆಟೋಮೊಬೈಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಭೂಷಣ ಮಿರ್ಜಿ ಹೇಳಿದ್ದಾರೆ. ಅವರು, ಸೋಮವಾರ ದಿ.18 ರಂದು ಬೆಳಗಾವಿ ನಗರದ ಎಸ್‌ಎಸ್‌ಎಸ್.ಸಮಿತಿಯ ಮಹಾವೀರ ಪಿ. ಮಿರ್ಜಿ ವಾಣಿಜ್ಯ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನೀಲ ಹಣಮಣ್ಣವರ ಅತಿಥಿಗಳಾಗಿ ಪಾಲ್ಗೊಂಡು, ಮಾತನಾಡುತ್ತ, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕೆಂದ ಅವರು, ಸನ್ಮತಿ ಶಿಕ್ಷಣ ಸಹಕಾರಿ ಸಮಿತಿಗೆ ಬಸ್ ನಿಲ್ದಾಣ ಮತ್ತು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸನ್ಮತಿ ಶಿಕ್ಷಣ ಸಹಕಾರಿ ಸಮಿತಿಯ ಆಡಳಿತ ಮಂಡಳಿಯ ಸದಸ್ಯ ಎ.ಬಿ. ಪಾಟೀಲ ವಹಿಸಿ, ಮಾತನಾಡಿದರು. ಇದೇ ವೇಳೆ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಅದರರಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರಾ್ಯಂಕ್ ಹಾಗೂ ಉಳಿದ ರಾ್ಯಂಕ್ ವಿಜೇತ ಶೇಡಬಾಳ ಸನ್ಮತಿ ವಿದ್ಯಾಲಯದ ವಿದ್ಯಾರ್ಥಿಗಳನ್ನೂ ಸಹ ಸನ್ಮಾನಿಸಲಾಯಿತು. ಈ ವೇಳೆ ಬೋದಕ-ಬೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ. ರವಿ ದಂಡಗಿ ವಾರ್ಷಿಕ ವರದಿ ಓದಿದರು. ಡಾ. ಅನುರಾಧಾ ಕಂಚಿ ಸ್ವಾಗತಿಸಿದರು. ಡಾ. ಭರತ ಅಲಸಂದಿ ಮತ್ತು ಪ್ರೊ. ನಿರ್ಮಲಾ ಗಡಾದ ಪರಿಚಯಿಸಿದರು. ನಾಗವೇಣಿ ಧರೆಣ್ಣವರ ಮತ್ತು ಪೂನಂ ಪಾಟೀಲ ನಿರೂಪಿಸಿದರು. ಸೋನಾಲಿ ಆಳಪ್ಪನವರ ವಂದಿಸಿದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 