ಧಾರವಾಡ.24: ನಾಳೆ ಮೇ 25 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನರ್ಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಹಯೋಗದಲ್ಲಿ ತೋಟಗಾರಿಕೆ ಇಲಾಖೆಯು ಮೇ 25 ರಿಂದ 29 ರ ವರೆಗೆ ತೋಟಗಾರಿಕೆ ಇಲಾಖೆ ಆವರಣದಲ್ಲಿ ವಿವಿಧ ತಳಿಗಳ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ.
ಮೇ 25 ರ ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ತೋಟಗಾರಿಕೆ ಇಲಾಖೆ ಆವರಣದಲ್ಲಿ ಮಾರಾಟ ಮೇಳವನ್ನು ಉದ್ಘಾಟಿಸಿ, ಚಾಲನೆ ನೀಡಲಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಡಾ.ಬಿ.ಸಿ. ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ತೋಟಗಾರಿಕೆ ಇಲಾಖೆ ಹಾಗೂ ಮಾವು ಅಭಿವೃದ್ಧಿ ನಿಗಮದ ಅಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.
ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳ 50 ಕ್ಕೂ ಹೆಚ್ಚು ಮಾವು ಬೆಳೆಗಾರರು ಈ ಮೇಳದಲ್ಲಿ ಭಾಗವಹಿಸಲು ತಮ್ಮ ಹೆಸರು ನೊಂದಾಯಿಸಿಕೊಂಡಿದ್ದಾರೆ.
ಆಪೂಸ್, ಕಲ್ಮಿ, ಬೈಗಂಪಲ್ಲಿ, ಕರೆಯಿಶಾಡ, ಮಲ್ಲಿಕಾ, ತುತಾಪೂರಿ, ನೀಲಂ ಸೇರಿದಂತೆ 35 ಕ್ಕೂ ಹೆಚ್ಚು ವಿವಿಧ ತಳಿಗಳ ಮಾವುಗಳು ಮೇಳದಲ್ಲಿ ಪ್ರದರ್ಶನ ಮತ್ತು ಮಾರಾಟಕ್ಕೆ ಬರಲಿವೆ.
ಮತ್ತು ಪ್ರತಿ ಕೆ.ಜಿ. ಮಾವಿನ ಹಣ್ಣಿಗೆ ಕನಿಷ್ಠ 150 ರಿಂದ ಗರಿಷ್ಠ 250 ರೂ.ಗಳ ವರೆಗೆ ದರವಿರಲಿದ್ದು, ಸಾರ್ವಜನಿಕರಿಗೆ ವಿವಿಧ ತಳಿಯ ಉತ್ತಮ ಮಾವಿನ ಹಣ್ಣುಗಳು ಕಡಿಮೆ ಬೆಲೆಯಲ್ಲಿ ಸಿಗುತ್ತವೆ.
ಮೇ 27 ರಂದು ಬೆಳಿಗ್ಗೆ 11 ಗಂಟೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿರುವ ಹಾಟರ್ಿಕ್ಲಿನಿಕ್ ಭವನದಲ್ಲಿ ಮಾವಿನ ಬೆಳೆಯ ಕುರಿತು ಕಾಯರ್ಾಗಾರ ಆಯೋಜಿಸಲಾಗಿದೆ.
ಮಾವು ಬೆಳೆದ ಪ್ರಗತಿಪರ ರೈತರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು, ತಜ್ಞರು ಈ ಕಾಯರ್ಾಗಾರದಲ್ಲಿ ಭಾಗವಹಿಸಿ ಉಪಯುಕ್ತ ಮಾಹಿತಿ ನೀಡಲಿದ್ದಾರೆ.
ಮಾವು ಪ್ರದರ್ಶನ ಮತ್ತು ಮಾರಾಟ ಮೇಳ-2018 ರ ಮಾಹಿತಿ:
ಕಳೆದ ವರ್ಷದ ಮಾವು ಮಾರಾಟ ಮೇಳದಲ್ಲಿ ನೂರಕ್ಕೂ ಹೆಚ್ಚು ಮಾವು ಬೆಳೆಗಾರರು ಭಾಗವಹಿಸಿ, ಸುಮಾರು 64 ಟನ್ ಮಾವಿನ ಹಣ್ಣು ಮಾರಾಟ ಮಾಡಿದ್ದರು. ಇದರಿಂದ 1 ಕೋಟಿ 29 ಸಾವಿರ ರೂ.ಗಳ ವ್ಯವಹಾರವಾಗಿತ್ತು ಎಂದು ತೋಟಗಾರಿಕೆ ಉಪನಿದರ್ೆಶಕ ಡಾ. ರಾಮಚಂದ್ರ ಕೆ. ಮಡಿವಾಳ ತಿಳಿಸಿದ್ದಾರೆ.
ಇಂದು ಆಯೋಜಿಸಿರುವ ಮೇಳದಲ್ಲಿ ವಿವಿಧ ತಳಿಗಳ ಮಾವು ಹಣ್ಣುಗಳ ಪ್ರದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಮಾವು ಮಾರಾಟಕ್ಕಾಗಿ 40 ಕ್ಕೂ ಹೆಚ್ಚು ಸುಸಜ್ಜಿತ ಮಳಿಗೆ ಹಾಗೂ ಶಾಮಿಯಾನ ಹಾಕಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಜಿಲ್ಲೆಯ ಜನರು ಮಾವು ಮಾರಾಟ ಮೇಳದ ಲಾಭ ಪಡೆದುಕೊಳ್ಳಬೇಕು ಮತ್ತು ಮಾವು ಬೆಳೆಯಲು ಆಸಕ್ತಿ ಇರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತೋಟಗಾರಿಕೆ ಇಲಾಖೆಯ ಉಪನಿದರ್ೆಶಕರ ಡಾ.ರಾಮಚಂದ್ರ ಅವರು ತಿಳಿಸಿದ್ದಾರೆ.