ಹಣ್ಣಿನ ವ್ಯಾಪಾರಿ ಕೊರೊನಾ ಸೋಂಕಿನಿಂದ ಗುಣ ಆಸ್ಪತ್ರೆಯಿಂದ ಡಿಸ್ಚಾಜ್೯
ಹಾವೇರಿ: ಮೇ 27 :ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಗ್ಗಾಂವ ತಾಲೂಕು ಅಂದಲಗಿ ಗ್ರಾಮದ ಮಾವಿನ ಹಣ್ಣಿನ ವ್ಯಾಪಾರಿ ಸೋಂಕಿನಿಂದ ಗುಣಹೊಂದಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದನು.
ಜಿಲ್ಲೆಯಲ್ಲಿ ಈವರೆಗೆ ಆರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ ಮೂರು ಜನರು ಗುಣಮುಖರಾಗಿದ್ದಾರೆ. ಬಾಕಿ ಮೂರು ಜನರಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು ಬಿಡುಗಡೆಯಾದ ಕ-853 ವ್ಯಕ್ತಿಯು ಲಾರಿಯಲ್ಲಿ ಮಾವಿನಹಣ್ಣನ್ನು ತುಂಬಿಕೊಂಡು ಮುಂಬೈ ಮಾರುಕಟ್ಟೆಗೆ ಹೊಗಿ ಬಂದ ಪ್ರವಾಸದ ಹಿನ್ನೆಲೆ ಹೊಂದಿದ್ದು, ತಪಾಸಣೆ ಸಂದರ್ಭದಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು (ಮೇ 11 ರಂದು). 14 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನ ಅಂತಿಮ ವರದಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಬುಧವಾರ ಬಿಡುಗಡೆಗೊಳಿಸಲಾಯಿತು.
ಸೋಂಕಿನಿಂದ ಗುಣಮುಖನಾದ ಈತನಿಗೆ ಆಸ್ಪತ್ರೆಯ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ಗುಲಾಬಿ ಹೂ ನೀಡಿ ಚಪ್ಪಾಳೆ ಮೂಲಕ ಶುಭ ಹಾರೈಸಿ ಮನೆಗೆ ಕಳುಹಿಸಿದರು. ನಿಯಮದಂತೆ ಮುಂದಿನ 14 ದಿವಸ ಗೃಹ ಪ್ರತ್ಯೇಕತೆಯಲ್ಲಿ ನಿಗಾವಹಿಸಲು ಸ್ಥಳೀಯ ವೈದ್ಯಕೀಯ ಸಿಬ್ಬಂದಿಗಳು ಕ್ರಮವಹಿಸಲಿದ್ದಾರೆ.
ಕೋವಿಡ್ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ.ವಿಶ್ವನಾಥ ಸಾಲಿಮಠ ಅವರು ಮಾಧ್ಯಮದವರಿಗೆ ಈ ಕುರಿತಂತೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಆರು ಜನರ ಪೈಕಿ ಮೂವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದು ಸಂತಸ ತಂದಿದೆ, ಶೀಘ್ರದಲ್ಲಿಯೇ ಇನ್ನುಳಿದ ಮೂರು ಜನ ಗುಣಮುಖರಾಗುವ ಲಕ್ಷಣಗಳಿವೆ. ಇತ್ತೀಚಿನ ಕೋವಿಡ್ ಸೋಂಕಿತರಿಗೆ ರೋಗದ ಲಕ್ಷಣಗಳು ಕಾಣುತ್ತಿಲ್ಲ ಎಂದು ತಿಳಿಸಿದರು.
ಆರ್.ಎಂ.ಓ ಡಾ. ಸುರೇಶ ಪೂಜಾರ ಅವರು ಮಾತನಾಡಿ, ಕೋವಿಡ್ ರೋಗ ಹರಡದಂತೆ ಪ್ರತಿಯೊಬ್ಬರು ಮುಂಜಾಗ್ರಾತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಕರ್ಾರದ ಮಾರ್ಗಸೂಚಿಗಳನ್ನು ಎಲ್ಲರು ಪಾಲಿಸಬೇಕು. ಕೋವಿಡ್ ಸೋಂಕು ಹರಡದಂತೆ ತಡೆಗಟ್ಟುವುದು ಎಲ್ಲರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಭಾರ ಶೂಶ್ರುಷಾಧಿಕಾರಿ ಶ್ರೀಮತಿ ರಾಜೇಶ್ವರಿ ಭಟ್, ದಾದಿಯರು ಆಸ್ಪತ್ರೆ ಸಿಬ್ಬಂದಿ ಮತ್ತಿತರರು ಹಾಜರಿದ್ದರು.
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ 