ಡಿಕೆ ಶಿವಕುಮಾರ್ ಜನ್ಮದಿನ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ

ಡಿಕೆ ಶಿವಕುಮಾರ್ ಜನ್ಮದಿನ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ  Fruit distribution to patients on the occasion of DK Shivakumar's birthday

ಮುಂಡಗೋಡ 15: ಕೆಪಿಸಿಸಿ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಮುಂಡಗೋಡದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಎಚ್ ಹಿರೇಹಳ್ಳಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣುಗಳನ್ನು ನೀಡಿ ಜನ್ಮದಿನವನ್ನು ಸೇವಾ ಕಾರ್ಯದ ಮೂಲಕ ಆಚರಿಸಿದರು.  ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.