ಬೆಂಗಳೂರು, ಫೆ 03 : ಆರ್ ಚಂದ್ರು ನಿರ್ದೇಶನದಲ್ಲಿ ಉಪೇಂದ್ರ ನಾಯಕರಾಗಿ ಅಭಿನಯಿಸುತ್ತಿರುವ ‘ಕಬ್ಜ’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ
ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸುವಲ್ಲಿ ಹೆಸರುವಾಸಿಯಾಗಿರುವ ಆರ್ ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸೂಪರ್‌ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷೆಯ, ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ‘
ಪ್ರಸ್ತುತ ಈ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಹೈದರಾಬಾದ್‌ನಲ್ಲಿ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ ೧೯೪೦ರ ಆಸುಪಾಸಿನ ಸಮಯದಲ್ಲಿ ನಡೆಯುವ ಕಥಾ ಹಂದರದ ಈ ಚಿತ್ರಕ್ಕೆ ಬೆಂಗಳೂರಿನ ಮಿನರ್ವಮಿಲ್‌ನಲ್ಲಿ ಕೆ ಜಿ ಎಫ಼್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ೮ ಅದ್ದೂರಿ ಸೆಟ್‌ಗಳನ್ನು ನಿರ್ಮಿಸಿದ್ದರು.
ಈ ಸೆಟ್‌ನಲ್ಲಿ ಚಿತ್ರಕ್ಕೆ ೨೨ ದಿನಗಳ ಕಾಲ ಹಗಲು - ರಾತ್ರಿ ಎನ್ನದೇ ಚಿತ್ರೀಕರಣ ನಡೆದಿದೆ ಹೈದರಾಬಾದ್‌ನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ನಡೆಯಲಿದ್ದು, ಅಲ್ಲೂ ಐದು ವಿಶೇಷ ಸೆಟ್‌ಗಳನ್ನು ನಿರ್ಮಿಸಲಾಗುತ್ತಿದೆ.
ಅಲ್ಲಿನ ಚಿತ್ರೀಕರಣದಲ್ಲಿ ಉಪೇಂದ್ರ ಅವರೊಂದಿಗೆ ಖ್ಯಾತ ನಟ ಜಗಪತಿ ಬಾಬು ಹಾಗೂ ಬಾಲಿವುಡ್‌ನ ಪ್ರಸಿದ್ದ ಕಲಾವಿದರು ಅಭಿನಯಿಸಲಿದ್ದಾರೆ.
ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್.ಚಂದ್ರು ಅವರೇ ನಿರ್ಮಿಸುತ್ತಿರುವ ‘ಕಬ್ಜ‘ ಚಿತ್ರಕ್ಕೆ ಕೆ.ಜಿ.ಎಫ಼್ ಖ್ಯಾತಿಯ ರವಿ ಬಸ್ರೂರ್ ಸಂಗೀತ ನೀಡುತ್ತಿದ್ದಾರೆ.
ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಕೆ ಪುರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ಆರ್.ರಾಜಶೇಖರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮ್ಹೇಶ್ ಎಸ್ ಸಂಕಲನ, ರಾಜು ಸುಂದರಂ, ಗಣೇಶ್ ಆಚಾರ್ಯ, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಜಯ್, ವಿಕ್ರಂ ಮೋರ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್ ಮುಂತಾದವರಿದ್ದಾರೆ.