ಪೋಲಿಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸ ಮೂಡಿಸಲು ಆತ್ಮ ಸ್ಥೈರ್ಯ ತುಂಬಿ: ಪಿ.ಎಸ್.ಐ
Full of self-confidence to build trust between police and public
ಲೋಕದರ್ಶನ ವರದಿ
ದಾಂಡೇಲಿ ಫೇ 17 : ದಾಂಡೇಲಿಯ ಬಾಂಗೂರ ನಗರದ ವೆಸ್ಟಕೋಸ್ಟ ಪೇಪರಮಿಲ್ ಆವರಣದಲ್ಲಿರುವ ಶಾಪಿಂಗ್ ಕಾಂಪ್ಲೇಕ್ಸ್‌ನ ಹೊರಾವರಣದಲ್ಲಿ ಸ್ಥಳೀಯ ನಗರ ಪೋಲಿಸ್ ಠಾಣೆಯಿಂದ ಕಾರ್ಮಿಕರಿಗಾಗಿ ಜನಸಂಪರ್ಕ ಸಭೆಯನ್ನು ಎರಿ್ಡಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ನಗರಠಾಣೆಯ ಪಿ.ಎಸ್.ಐ ಅಮೀನ ಅತ್ತಾರ ಅವರು, ಪೋಲಿಸರು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸ ಮೂಡಿಸುವ ಉದ್ದೇಶದಿಂದ ಮನೆ ಮನೆಗೆ ಪೋಲಿಸ್ ವಿಶೇಷ ಕಾರ್ಯಕ್ರಮದಡಿ ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಜನರಲ್ಲಿ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಲಾಗಿದೆ. ಸಂಚಾರಿ ನಿಯಮಗಳ ಅರಿವು, ಸುರಕ್ಷಿತ ಚಾಲನೆ, ಸೈಬರ್ ಅಪರಾಧ ತಡ,ೆ ಕಾರ್ಮಿಕರ ಸುರಕ್ಷತೆ, ದೂರುಗಳಿಗೆ ತ್ವರಿತ ಸ್ಪಂದನೆ, ತನಿಖೆಯ ಮಾಹಿತಿ ಪೂರೈಕೆ ಮುಂತಾದ ಅಂಶಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು. ಸಿಪಿಐ ಶಿವಾನಂದ ಅಂಬಿಗೇರ ಅವರು ನ್ಯಾಯಾಲಯದಲ್ಲಿರುವ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆಯಾಗಲು ಸಾಕ್ಷ್ಯಗಳ ಕೊರತೆಯೇ ಪ್ರಮುಖ ಕಾರಣವಾಗಿದೆ. ಸಾಕ್ಷಿದಾರರು ನ್ಯಾಯಾಲಯದಲ್ಲಿ ಹಿಂದೇಟು ಹಾಕುವದರಿಂದ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಕೇಂದ್ರ ಸರ್ಕಾರ ಡಿಜಿಟಲಿಕರಣದ ಮೂಲಕ ಸಾಕ್ಷ್ಯಗಳ ಚಿತ್ರೀಕರಣ ಸೇರಿದಂತೆ ಕಾನೂನು ತಿದ್ದುಪಡಿ ತಂದಿದ್ದು, ಅಪರಾಧಿಗಳಿಗೆ ಶಿಕ್ಷೆ ಖಚಿತಪಡಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಗದ ಕಾರ್ಖಾನೆಯ ಕಾರ್ಮಿಕರು ಭಾಗವಹಿಸಿ ಕಾನೂನು ವಿಚಾರಗಳ ಕುರಿತು ಸಂವಾದ ನಡೆಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 