ಲೋಕದರ್ಶನ ವರದಿ
ಬಾಗಲಕೋಟೆ 24:ಜಿಲ್ಲಾಡಳಿತದ ವತಿಯಿಂದ ಸಿದ್ಧರಾಮೇಶ್ವರ, ಮಡಿವಾಳ ಮಾಚಿದೇವ, ಸವಿತಾ ಮಹಷರ್ಿ ಹಾಗೂ ಸಂತ ಸೇವಾಲಾಲ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಜನವರಿ 28ರಂದು ಸಿದ್ಧರಾಮೇಶ್ವರ ಜಯಂತಿ, ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ, ಫೆ.12 ರಂದು ಸವಿತಾ ಮಹಷರ್ಿ ಜಯಂತಿ ಹಾಗೂ ಫೆ.15 ರಂದು ಸಂತ ಸೇವಾಲಾಲ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜ.28ರಂದು ಸಿದ್ಧರಾಮೇಶ್ವರ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದ ಆವರಣದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ, ಹಾಗೂ 11 ಗಂಟೆಗೆ ರಂಗಮಂದಿರದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದ ಆವರಣದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ, ಹಾಗೂ 10 ಗಂಟೆಗೆ ರಂಗಮಂದಿರದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಫೆ.12 ರಂದು ಸವಿತಾ ಮಹಷರ್ಿ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದ ಆವರಣದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ, ಹಾಗೂ 9 ಗಂಟೆಗೆ ರಂಗಮಂದಿರದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಫೆ.15 ರಂದು ಸಂತ ಸೇವಾಲಾಲ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದ ಆವರಣದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ, ಹಾಗೂ 10 ಗಂಟೆಗೆ ರಂಗಮಂದಿರದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಆಯಾ ಜಯಂತಿಗಳಂದು ನುರಿತ ಉಪನ್ಯಾಸಕರಿಂದ ಉಪನ್ಯಾಸ, ಸಾಂಸ್ಕೃತಿಕ ಕಲೆ, ನೃತ್ಯ ರೂಪಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಯಿತು. ಅದರಂತೆ ಆಯಾ ಜಯಂತಿಗಳಿಗೆ ಶಿಷ್ಠಾಚಾರದಂತೆ ಅತಿಥಿಗಣ್ಯರನ್ನು ಆಹ್ವಾನಿಸುವುದು, ಮೆರವಣಿಗೆ ಸಂದರ್ಭಗಳಲ್ಲಿ ಮೆರವಣಿಗೆ ಸಾಗುವ ರಸ್ತೆಗಳ ಸ್ವಚ್ಚತೆ, ವಿವಿಧ ವೃತ್ತಗಳ ಸ್ವಚ್ಚತೆ, ದೀಪಾಲಂಕಾರ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಎಲ್ಲ ಮಹನೀಯರ ಜಯಂತಿಗಳ ದಿನದಂದು ಆಯಾ ತಾಲೂಕಾ ಮಟ್ಟದ ಕಚೇರಿಗಳಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕಿ ವಿದ್ಯಾವತಿ ಎಚ್.ಬಿ. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.