ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾದ ಯೋಧನಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾದ ಯೋಧನಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ  Funeral with state honors for soldier martyred in Jammu and Kashmir

ಯಮಕನಮರಡಿ 05 :  ಆರಿ​‍್ಸ. ಗ್ರಾಮದ ನಿವಾಸಿ ಆಕಾಶ್ ಪಾಟೀಲ್ (33) ಅವರು ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಆಗಸ್ಟ್‌ 4ರಂದು ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮವಾದ ಆರಿ​‍್ಸ. ಗ್ರಾಮಕ್ಕೆ ತರಲಾಗಿದ್ದು, ಗ್ರಾಮಸ್ಥರು, ಮಾಜಿ ಯೋಧರು, ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾವಪೂರ್ಣವಾಗಿ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ ಹೊಳೆನವರ್, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸ್ಥಳೀಯ ನಾಡಕಚೇರಿ ಉಪತಹಶೀಲ್ದಾರ್ ಸಿ.ಆರ್‌. ಸೀಗಿಹೊಳಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ಸರ್ಕಾರಿ ಗೌರವದೊಂದಿಗೆ ಹುತಾತ್ಮ ಆಕಾಶ್ ಪಾಟೀಲ್ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ದೇಶಾಭಿಮಾನಿಗಳು ಭಾಗವಹಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಅಂತ್ಯಕ್ರಿಯೆ ಸಂದರ್ಭದಲ್ಲಿ ಹುತಾತ್ಮನ ತಾಯಿ, ಪತ್ನಿ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಅಂತಿಮ ನಮನ ಸಲ್ಲಿಸಿ ಕಣ್ಣೀರಿನ ವಿದಾಯ ಹೇಳಿದರು.