ಜಿ. ಎಚ್. ಕಾಲೇಜಿನಲ್ಲಿ ಸಮಾಜ ಶಾಸ್ತ್ರೀಯ ಸಂಶೋಧನಾ ಕಾರ್ಯಾಗಾರ
G. H. Sociological Research Workshop at College
ಹಾವೇರಿ, 30: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗವು ಆಯೋಜಿಸಿದ್ದ ಸಮಾಜ ಶಾಸ್ತ್ರೀಯ ಸಂಶೋಧನನೆಯಲ್ಲಿ ಉದಯೋನ್ಮುಖ ಪ್ರವೃತ್ತಿಗಳು ಮತ್ತು ಪ್ರಸ್ತುತ ಸಾಮಾಜಿಕ ಸಮಸ್ಯೆಗಳನ್ನು ಅನ್ವೇಷಿಸುವುದು ವಿಷಯದ ಕುರಿತಾದ ಒಂದು ದಿನದ ಕಾರ್ಯಾಗಾರ ನಡೆಯಿತು.
ಈ ಕಾರ್ಯಾಗಾರವನ್ನು ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಪ್ರೊ. ರೂಪಾ ಕೋರೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ನವಲಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಸಂತೋಷ ಹುಬ್ಬಳ್ಳಿ ಹಾಗೂ ಬ್ಯಾಡಗಿ ಬಿಇಎಂಎಸ್ ಕಾಲೇಜಿನ ಡಾ. ಪ್ರಭುಲಿಂಗ ದೊಡ್ಡಮನಿ ಆಗಮಿಸಿದ್ದರು. ಪದವಿ ಪ್ರಾಚಾರ್ಯ ಪ್ರೊ. ಡಿ. ಎ. ಕೊಲ್ಹಾಪುರೆ ಅಧ್ಯಕ್ಷೆ ವಹಿಸಿದ್ದರು. ವಿಭಾಗದ ಮುಖ್ಯಸ್ಥ ಪ್ರೊ. ಶರಣಪ್ಪ ಕದರಮಂಡಲಗಿ ಸ್ವಾಗತಿಸಿದರು. ಪ್ರೊ. ಉದಯ ಕುರುಬರ ವಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 