ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮಕ್ಕೆ ಜಿ.ಪಂ. ಸಿಇಓ ಭುವನೇಶ ಪಾಟೀಲ ಭೇಟಿ
G.P. for Mukkala village of Kalaghatagi taluk. CEO Bhuvanesh Patil met
ಲೋಕದರ್ಶನ ವರದಿ
ಧಾರವಾಡ 15: ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ನಿನ್ನೆ (ಮೇ.14) ಬೆಳಿಗ್ಗೆ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಮೂಲ ಸೌಕರ್ಯಗಳ ಬಗ್ಗೆ ಹಾಗೂ ಸ್ವಚ್ಛತೆಯ ಬಗ್ಗೆ ಪರೀವೀಕ್ಷಣೆ ಮಾಡಿ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.
ಕಲಘಟಗಿ ಪಟ್ಟಣದಲ್ಲಿರುವ ಅಕ್ಕ ಕೆಫೆಗೆ ಭೇಟಿ ನೀಡಿ, ಅಕ್ಕ ಕೆಫೆಯಲ್ಲಿ ತಯಾರಿಸುವ ಆಹಾರ, ಸ್ವಚ್ಛತೆ, ನೈರ್ಮಲ್ಯ ಕುರಿತು ಸಿಬ್ಬಂದಿಗಳೊಂದಿಗೆ ಸಂವಾದವನ್ನು ನಡೆಸಿದರು. ಸ್ವಚ್ಚತೆ ಹಾಗೂ ತಯಾರಿಸುವ ಆಹಾರ ಪದಾರ್ಥಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ನಂತರ ಅವರು ಮುಕ್ಕಲ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಅರಿವು ಕೇಂದ್ರ (ಡಿಜಿಟಲ್ ಲೈಬ್ರರಿ) ಪರೀಶೀಲಿಸಿ, ಬೇಸಿಗೆ ಬೇಸುಗೆ ಕಾರ್ಯಕ್ರಮಗಳ ವೇಳಾ ಪಟ್ಟಿಯಂತೆ ಹಮ್ಮಿಕೊಂಡಿರುವ ಕಾರ್ಯಕ್ರಮ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿ, ಮಕ್ಕಳ ಕಾರ್ಯಕ್ರಮಗಳಾದ ಏಕಪಾತ್ರಾಭಿನಯ, ಕಿರು ಚಿತ್ರ, ನಾಟಕ ಹಾಗೂ ನೃತ್ಯಗಳನ್ನು ವೀಕ್ಷಿಸಿದರು.
ಮಧ್ಯಾಹ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಕಲಘಟಗಿ ತಾಲೂಕು ಪಂಚಾಯತ ಸಭಾಭವನದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಹಾಗೂ ವಿವಿಧ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ ಜರುಗಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಸಾವಂತ ಹಾಗೂ ಸಹಾಯಕ ನಿರ್ದೇಶಕ (ಗ್ರಾ.ಉ) ಗೀರೀಶ ಕೋರಿ, ಸಹಾಯಕ ನಿರ್ದೇಶಕಿ (ಪಂ.ರಾ) ಸುಮಾ ನಾರಾಯಣ ಮತ್ತು ತಾಲೂಕಿನ ಎಲ್ಲಾ ಇಲಾಖಾ ಅನುಷ್ಠಾನ ಅಧಿಕಾರಗಳು ಹಾಗೂ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಸಿಬ್ಬಂದಿಗಳು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 