ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತ ಪ್ರಗತಿ ಪರೀಶೀಲನಾ ಸಭೆಯಲ್ಲಿ ಜಿ ಪಂ.ಸಿಇಒ ಸೂಚನೆ
G Pt. CEO's instructions at the progress review meeting on rural drinking water and sanitation
ವಿಜಯನಗರ (ಹೊಸಪೇಟೆ) 08: ಬೇಸಿಗೆ ಆರಂಭವಾಗಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ, ಅದರಲ್ಲೂ ಗ್ರಾಮೀಣ ಭಾಗದ ಜನ, ಜಾನುವಾರುಗಳಿಗೆ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ನಳದ ಸಂಪರ್ಕ ಕಲ್ಪಿಸುವ ನೀರು ಪೂರೈಕೆ ಮಾಡಲಾಗುತ್ತದೆ. ವಿವಿಧ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಅಪೂರ್ಣಗೊಂಡಿದ್ದಲ್ಲಿ ತ್ವರಿತವಾಗಿ ಪೂರ್ಣಗೊಳಿಸಿ ಸಮರ್ಕವಾಗಿ ನೀರು ಸರಬರಾಜು ಮಾಡಬೇಕು. ಬಾಕಿ ಇರುವ ಪೈಪ್ಲೈನ್ ಅಳವಡಿಕೆ ಹಾಗೂ ಟ್ಯಾಂಕ್ ನಿರ್ಮಾಣ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಬೇಸಿಗೆ ಆರಂಭವಾಗಿರುವುದರಿಂದ ಅಂತರ್ಜಲ ಮಟ್ಟ ಕುಸಿದಿರುವ ಹಳ್ಳಿಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ಖಾಸಗಿ ಕೊಳವೆ ಬಾವಿ ಬಾಡಿಗೆಗೆ ಪಡೆದು ಅಥವಾ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ದುರಸ್ತಿಗೆ ಬಂದ ಕೈಪಂಪುಗಳನ್ನು ನಿರ್ಲಕ್ಷ್ಯವಹಿಸದೇ ತ್ವರಿತವಾಗಿ ದುರಸ್ತಿಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.
ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು. ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿರುವ ಘಟಕಗಳ ವಸ್ತುಸ್ಥಿತಿ ಪರೀಶೀಲಿಸಿ ಸಮಗ್ರ ವರದಿ ನೀಡಬೇಕು. ದುರಸ್ತಿಗೆ ಬಂದಿರುವ ಘಟಕಗಳನ್ನು ತಕ್ಷಣವೇ ಸರಿಪಡಿಸಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಮಳೆಗಾಲವೂ ಸಮೀಪಿಸುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಿರುತ್ತದೆ. ಆದ್ದರಿಂದ ನೀರಿನ ಮೂಲಗಳ ಸ್ವಚ್ಛ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಗ್ರಾಮ ಮಟ್ಟದಲ್ಲಿ ನೀರಿನ ಗುಣಮಟ್ಟ ಪರೀಕ್ಷಿಸಲು ನೀಡಲಾಗಿರುವ ಫೀಲ್ಡ್ ಟೆಸ್ಟ್ ಕಿಟ್ ಬಳಸಿ ಕಾಲಕಾಲಕ್ಕೆ ನೀರಿನ ಮಾದರಿ ಪರೀಕ್ಷಿಸಬೇಕು ಮತ್ತು ಕಡ್ಡಾಯವಾಗಿ ಇದರ ದಾಖಲೆಯನ್ನು ಗ್ರಾಮ ಪಂಚಾಯತಿಯಲ್ಲಿ ನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸುವ ಅಥವಾ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಚ್ಚರಿಕೆ ನೀಡಿದರು.
ನೀರಿನ ಸಮಸ್ಯೆಗೆ 24/7 ಸಹಾಯವಾಣಿ ಆರಂಭ :
ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಮುಂಜಾಗೃತ ಕ್ರಮವಾಗಿ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ ಸಾಕಷ್ಟು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ ಕೂಡ ನೀರಿನ ಸಮಸ್ಯೆ ಉಲ್ಬಣಗೊಂಡಲ್ಲಿ ಸಾರ್ವಜನಿಕರ ಸಮಸ್ಯೆ ಅಥವಾ ದೂರು ದಾಖಲಿಸಿಕೊಂಡು ನಿವಾರಿಸಲು ಹಾಗೂ ಬರಪರಿಸ್ಥಿತಿಯನ್ನು ಸಮರ್ಕವಾಗಿ ನಿರ್ವಹಿಸಲು, ಜಿಲ್ಲಾ ಪಂಚಾಯಿತಿಯಲ್ಲಿ 24/7 ಕಾರ್ಯಾಚರಣೆಯ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ನೀರಿನ ಸಮಸ್ಯೆ ಉಂಟಾದಲ್ಲಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ:9480837823ಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎಸ್.ದೀಪಾ, ಡಿಡಿಪಿಐ ವೆಂಕಟೇಶ್ ರಾಮಚಂದ್ರ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 