ಜಿ.ಟಿ. ನಾಯ್ಕಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ
G.T. Naik appointed District Congress President
ಕಾರವಾರ 10: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಜನಪ್ರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಯುವ ಧುರೀಣ ಜಿ.ಟಿ. ನಾಯ್ಕ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸೆಪ್ಟೆಂಬರ್ 9ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಸಮಿತಿಗಳ ಪುನರ್‌ರಚನೆ ಹಾಗೂ ನೂತನ ಅಧ್ಯಕ್ಷರ ನೇಮಕಾತಿಗೆ ಅನುಮೋದನೆ ನೀಡಿರುವುದಾಗಿ ತಿಳಿಸಿದ್ದಾರೆ. ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.
ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ನಡೆದಿದೆ. ಜಿಲ್ಲೆಗಳಿಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಪದಾಧಿಕಾರಿಗಳು, ಹಿರಿಯ ಮುಖಂಡರು, ಯುವಕರು, ಮಹಿಳಾ ಪದಾಧಿಕಾರಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಸಂಘಟನೆಯ ಸ್ಥಿತಿ ಮತ್ತು ಮುಂದಿನ ಕಾರ್ಯತಂತ್ರದ ಕುರಿತು ವರದಿ ಸಲ್ಲಿಸಿದ್ದರು. ಈ ವರದಿಗಳ ಆಧಾರದ ಮೇಲೆ ಹಿರಿಯ ನಾಯಕರೊಂದಿಗೆ ಚರ್ಚಿಸಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.
ಜಿ.ಟಿ. ನಾಯ್ಕ ಅವರ ನೇಮಕಾತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದ್ದು, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
ಸಿದ್ದಾಪುರ ತಾಲೂಕಿನವರಾದ ಜಿ.ಟಿ. ನಾಯ್ಕ ಅವರು ಕಾರವಾರದಲ್ಲಿ ಕಳೆದ ಎರಡು ದಶಕಗಳಿಂದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಬಗ್ಗೆ ಉತ್ತಮ ಅರಿವು ಹೊಂದಿರುವ ಅವರು, ಉತ್ತಮ ವಾಗ್ಮಿ ಹಾಗೂ ಎಲ್ಲರೊಂದಿಗೆ ಬೆರೆಯುವ ಗುಣದಿಂದ ಗುರುತಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 