ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಟಿ.ನಾಯ್ಕ ಅಧಿಕಾರಿ ಸ್ವೀಕಾರ
G.T. Naik assumes office as Uttara Kannada District Congress President
ಕಾರವಾರ 25 : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಟಿ.ನಾಯ್ಕ ಅಧಿಕಾರಿ ಸ್ವೀಕರಿಸಿದರು. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಕಿಕ್ಕಿರಿದು ತುಂಬಿದ ಕಾಂಗ್ರೆಸ್ ಕಾರ್ಯಕರ್ತರ ಹರ್ಷೋದ್ಗಾರದ ನಡುವೆ ನಿಕಟ ಪೂರ್ವ ಅಧ್ಯಕ್ಷ ಸಾಯಿ ಗಾಂವ್ಕರ್ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಸ್ವೀಕರಿಸಿದರು. ಪ್ರಾಸ್ತಾವಿಕವಾಗಿ ಡಿಸಿಸಿ ವಕ್ತಾರ ಶಂಭು ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಪ್ರಬಲವಾಗಿದೆ. ಗ್ರಾಮ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಬಲ ಪಡಿಸಬೇಕಿದೆ ಎಂದರು.ಶಾಸಕ ಭೀಮಣ್ಣ ಟಿ.ನಾಯ್ಕ ಮಾತನಾಡಿ ಜಿಲ್ಲೆಯಲ್ಲಿ ಹೊಸ ಯುಗ ಪ್ರಾರಂಭವಾಗುತ್ತಿದೆ. ನೂತನ ಜಿಲ್ಲಾಧ್ಯಕ್ಷರಾದ ಜಿ.ಟಿ.ನಾಯ್ಕರಿಗೆ ಶುಭ ಕೋರುತ್ತೇನೆ. ಶಾಸಕ ಸತೀಶ್ ಸೈಲ್ ಮಾತನಾಡಿ ಇವತ್ತಿನ ಸಮಾರಂಭದಲ್ಲಿ ಕಾಂಗ್ರೆಸ್ ಬಲ ಗೊತ್ತಾಗಿದೆ.
ಒಗ್ಗಟ್ಟು ಸಹ ಕಂಡಿದೆ . ಪಕ್ಷ ಅಂದ ಮೇಲೆ ತಗ್ಗಿ ಬಗ್ಗಿ ನಡೆಯಬೇಕಾಗುತ್ತದೆ ಎಂದರು. ಪಕ್ಷದಲ್ಲಿ ಮಿತ್ರರು ಶತ್ರುಗಳು ಇರ್ತಾರೆ. ಶತೃ ಇದ್ದಾಗಲೇ ನಾವು ಜಾಗೃತರಾಗಿ ಇರ್ತೇವೆ ಎಂದರು. ವೇದಿಕೆಯಲ್ಲಿ ಶಿರಸಿ ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ, ಕಾರವಾರ ಶಾಸಕ ಸತೀಶ್ ಸೈಲ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮಾರೋಳ್ಳಿ, ಮಾಜಿ ಶಾಸಕ ವಿ.ಎಸ್. ಪಾಟೀಲ್ ,ಮಾಜಿ ಶಾಸಕಿ ಶಾರದಾ ಶೆಟ್ಟಿ, ಕಾಂಗ್ರೆಸ್ ಧುರೀಣರಾದ ರಾಮಾ ಮೋಗೇರಾ, ನಾಗರಾಜ ನಾರ್ವೇಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶಾರದಾ ರಾಠೋಡ್ , ಆರ್.ಎಚ್ ,ನಾಯ್ಕ,ಜ್ಯೋತಿ ಪಾಟೀಲ್, ಸುಶ್ಮಾ ರಾಜಗೋಪಾಲ್, ಸೇರಿದಂತೆ ಪಕ್ಷದ ನೂರಾರು ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು .
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 