ಬೆಂಗಳೂರು, ಫೆ 22 : ಗಾಂಜ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ, 2.27ಕೆಜಿ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.ಪಶ್ಚಿಮ ಬಂಗಾಳ ಮೂಲದ ನಿಶ್ಚಲ್ ಭಾರತಿ (42), ರೋಹಿತ್ ತಾಪ (40) ಬಂಧಿತ ಆರೋಪಿಗಳು.ಬಂಧಿತರಿಂದ 2.272ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮತ್ತಿಕೆರೆ ಬಳಿಯ ಫ್ಲೈ ಓವರ್ ಕೆಳಗೆ ಗಾಂಜಾ ಮಾರಾಟಮಾಡಲಾಗುತ್ತಿದೆ ಎಂವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.ಬಂಧಿತರು ಡಾರ್ಜಿಲಿಂಗ್ ನಲ್ಲಿ ಪರಿಚಯವಿದ್ದ ವ್ಯಕ್ತಿಯಿಂದ ಕಡಿಮೆ ಬೆಲೆಯಲ್ಲಿ ಗಾಂಜಾ ಖರೀದಿಸಿ,ನಗರದಲ್ಲಿ ತಂದು ಮಾರಾಟ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳನ್ನು ಬಂಧಿಸುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದು, ಯಶವಂತಪುರ ಪೊಲೀಸ್ ಇನ್ಸ್ ಪೆಕ್ಟರ್ ಮೊಹ್ಮದ್ ಮುಕಾರಮ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.