ಒಣ ಮರದ ಕೊಂಬೆ ಬಿದ್ದು ಬಾಲಕಿ ಗಂಭೀರ

ಬೆಂಗಳೂರು,  ಮಾ12, ತಂದೆ ಜತೆ ಬೈಕ್ ನಲ್ಲಿ ತೆರಳುತ್ತಿದ್ದ ಬಾಲಕಿ ಮೇಲೆ ಒಣ ಮರದ ಕೊಂಬೆ  ಬಿದ್ದು, ಗಾಯಗೊಂಡಿರುವ ಘಟನೆ ರಾಮಮೂರ್ತಿನಗರದ ಕೌಡಲಹಳ್ಳಿಯಲ್ಲಿ ನಡೆದಿದೆ.ತ್ರಿಷಾ ಎಂಬ ಬಾಲಕಿಯ ತಲೆಗೆ ಗಂಭೀರ ಗಾಯವಾಗಿದ್ದು, ಸದ್ಯ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.ಬಾಲಕಿ ತಂದೆ ರಾಜು ಜೊತೆಗೆ ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಈ ಹಿಂದೆ ಒಣಮರದ ತೆರವಿಗೆ ಬಿಬಿಎಂಪಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದೇವು. ಆದರೂ, ಯಾವುದೇ ಕ್ರಮಕೈಗೊಂಡಿರಲಿಲ್ಲ.ಅಧಿಕಾರಿಗಳು ನಿರ್ಲಕ್ಷ್ಯವೇ ಈ ದುರ್ಘಟನೆ ಗೆ ಕಾರಣ ಎಂದು ಆರೋಪಿಸಿ , ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ದೂರು ದಾಖಲಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.