ಜಿಐಎಸ್ ಆಧಾರಿತ ಮಹಾ ಯೋಜನೆ: ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ
GIS-based mega project: Public consultation invited
ಲೋಕದರ್ಶನ ವರದಿ
ಜಿಐಎಸ್ ಆಧಾರಿತ ಮಹಾ ಯೋಜನೆ: ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ
ವಿಜಯಪುರ 18: ವಿಜಯಪುರ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಮಹಾ ಯೋಜನೆ-2041-(ಪ-3),ಸರಕಾರದ ಆದೇಶದಂತೆ ತಾತ್ಕಾಲಿಕ ಅನುಮೋದನೆಯಾಗಿದೆ.
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 13(1) ರಂತೆ ಸಾರ್ವಜನಿಕರಿಂದ ಸಲಹೆ-ಸೂಚನೆ ಹಾಗೂ ಆಕ್ಷೇಪಣೆಗಳ ಸಲ್ಲಿಸುವ ಹಿನ್ನೆಲೆಯಲ್ಲಿ ದಿ. 16ರಂದು ಪ್ರಾಧಿಕಾರದ ಕಚೇರಿ, ಪತ್ರಿಕೆಗಳಲ್ಲಿ, ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿದೆ.
ಈ ಕುರಿತಾಗಿ ನಗರದ ವೃತ್ತಿಪರ ಅಭಿಯಂತರರು, ವಾಸ್ತು ಶಿಲ್ಪಿಗಳು, ಕ್ರೇಡಾಯ್ ಹಾಗೂ ಇತರೆ ಸಂಸ್ಥೆಗಳೊಂದಿಗೆ ಪೂರ್ವಭಾವಿ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರ ಎಸ್ ಸಂಬಣ್ಣಿ ಇವರ ಅಧ್ಯಕ್ಷತೆಯಲ್ಲಿ ಫೆ.16ರಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು.
ತಾತ್ಕಾಲಿಕ ಮಹಾ ಯೋಜನೆಯ ವಲಯ ನಿಯಮಾವಳಿಯಲ್ಲಿ ವಿವಿಧ ವಲಯದಲ್ಲಿನ ಬೆಳವಣಿಗೆಗಳ ಹಾಗೂ ವಿಶೇಷ ಸಂದರ್ಭಗಳ ಅವಕಾಶಗಳು, ನಡುಜಾಗೆಗಳು, ಕಟ್ಟಡಗಳ ಆವೃತ್ತಿಗಳು ಹಾಗೂ ಎತ್ತರ ಮತ್ತು ಕಟ್ಟಡಗಳ ಎತ್ತರಕ್ಕೆ ತಕ್ಕಂತೆ ರಸ್ತೆ ಅಗಲ, ಮುಖ್ಯ ರಸ್ತೆಗಳು, ಕಟ್ಟಡ ರೇಖೆಗಳು, ವಾಹನ ನಿಲುಗಡೆ ಸೌಲಭ್ಯಗಳು ಆಯಾ ವಲಯದ ಕಟ್ಟಡ ಬೆಳವಣಿಗೆ ಮತ್ತು ಅಂತಹ ಕಟ್ಟಡಗಳಿಗೆ ನಿಗಧಿಪಡಿಸಿದ ನಿಯಮಗಳ ಕುರಿತು ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಾಧಿಕಾರದ ಅಧ್ಯಕ್ಷರು ಸಭೆಯಲ್ಲಿ ತಿಳಿಸಿದರು.
ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಅವರು ಮಹಾಯೋಜನೆ ಕುರಿತು ಮಾಹಿತಿ ನೀಡಿದರು. ನಗರ ಯೋಜನಾಧಿಕಾರಿ ಸುಬ್ರಮಣ್ಯ ಕೆ ವಡ್ಡರ ಅವರು ನಿಯಮಾವಳಿ ಕುರಿತು ತಾಂತ್ರಿಕ ಮಾಹಿತಿ ನೀಡಿದರು. ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರೆಂದು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಫೆ.21ರಂದು ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ, ಪ್ರಗತಿ ಪರೀಶೀಲನಾ ಸಭೆ
ವಿಜಯಪುರ 18: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಹಯೋಗದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನಿಷ್ಠಾನ ಕುರಿತ ಕಾರ್ಯಗಾರ ಹಾಗೂ ಪ್ರಗತಿ ಪರೀಶೀಲನೆ
ಸಭೆಯ ಫೆ.21ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯುಜಿಸಲಾಗಿದೆ.
ಅಂದು,ಬೆಳಿಗ್ಗೆ 11 ಗಂಟೆಗೆ ನಡೆಯು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನಿಷ್ಠಾನ ಕುರಿತ ಕಾರ್ಯಗಾರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಭಾಗವಹಗಿಸಲಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್ ಅವರು ಗೌರವಾನ್ವಿತ ಅಥಿತಿಗಳಾಗಿ ಭಾಗವಹಿಸುವರು. ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಹಿ2 ಹಾಗೂ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಜೆಂರ್ಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ, ಬೆಳಗಾವಿ ವಿಭಾಗದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್. ಆರ್. ಪಾಟೀಲ (ಬ್ಯಾಡಗಿ), ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಾ ನಾಯಕ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎಸ್.ಕವಲಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟಿಲ, ಅಶೋಕ ಮನಗೂಳಿ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಕೇಶವ ಪ್ರಸಾದ ಎಸ್, ಬೆಂಗಳೂರು-2 ವಿಭಾಗದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಶಾಸಕ ದಿನೇಶ ಗೂಳಿಗೌಡ, ಮೈಸೂರು ವಿಭಾಗದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ, ಬೆಂಗಳೂರು-1 ವಿಭಾಗದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಸೂರಜ ಹೆಗಡೆ, ಕಲಬುರಗಿ ವಿಭಾಗದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್. ಆರ್ ಮೆಹರೂಜ್ ಖಾನ್, ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಎಸ್ ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಮಹಾನಗರ ಪಾಲಿಕೆಯ ವ್ಯಾಪ್ತಿಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಬ್ಬೀರ ಅಹ್ಮದ ಎಸ್. ಜಾಗೀರದಾರ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹೊನ್ನಮಲ್ಲ ಸಾರವಾಡ, ಸುಂದರಪಾಲ ರಾಠೋಡ, ನಬೀಲಾಲ ನಾಯ್ಕೋಡಿ, ಆನಂದ ಜಾಧವ, ಮಾಹಾದೇವಿ ಗೋಕಾಕ ಅವರು ಭಾಗವಹಿಸಲಿದ್ದಾರೆ. ಎಂದು ಪ್ರಕಟಣೆಯಲ್ಲಿ ತಿಳಸಿದೆ.
ಡಾ. ವಾಸು ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕರ ವಸೂಲಾತಿ ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ
ವಿಜಯಪುರ 18: ಫೆ.17ರಂದು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರೊಂದಿಗೆ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ ವಸೂಲಾತಿ ಕುರಿತು ಪ್ರಗತಿ ಪರೀಶೀಲನಾ ಸಭೆ ಜರುಗಿತು.
ಮಾತನಾಡಿದ ಉಪ ಕಾರ್ಯದರ್ಶಿ ಅವರು,ಗ್ರಾಮ ಪಂಚಾಯತಿಗಳು ಸರ್ಕಾರದ ಅನುದಾನಕ್ಕಿಂತ ಸ್ಥಳೀಯವಾಗಿ ಸಂಗ್ರಹವಾಗುವ ಸಂಪನ್ಮೂಲಗಳ ಮೇಲೆ ನೌಕರರ ವೇತನ, ಕುಡಿಯುವ ನೀರು, ಬೀದಿ ದೀಪಗಳ ನಿರ್ವಹಣೆ, ಸ್ವಚ್ಛತೆ ಮತ್ತಿತರ ಕಾರ್ಯಗಳಿಗೆ ಅನುದಾನ ಬಳಸಬೇಕಾಗುತ್ತದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಲವಾರು ಯೋಜನೆಗಳು ಜಾರಿಗೆಯಲ್ಲಿವೆ. ಈ ಎಲ್ಲ ಯೋಜನೆಗಳ ಸೌಲಭ್ಯಗಳನ್ನು ಸಕಾಲದಲ್ಲಿ ಗ್ರಾಮೀಣ ಜನರಿಗೆ ತಲುಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಮತ್ತು ಗ್ರಾಮ ಪಂಚಾಯತಿಗಳನ್ನು ಸಬಲೀಕರಣಗೊಳಿಸುವುದೂ ಸಹ ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಜವಾಬ್ದಾರಿಯನ್ನು ಅವಕಾಶ ಎಂದು ತಿಳಿದು ಈ ಅವಕಾಶವನ್ನು ಉಪಯೋಗಿಸಿಕೊಂಡು ನಾವು ಗ್ರಾಮೀಣ ಮಟ್ಟದ ಜನರಿಗೆ ಮೀಸಲಿರುವ ಸೇವೆಗಳನ್ನು ಅವರಿಗೆ ತಲುಪಿಸಿದರೆ ಮಾತ್ರ ನಾವು ಯಶಸ್ವಿ ಕಾಣುತ್ತೇವೆ.
ಈ ನಿಟ್ಟಿನಲ್ಲಿ ಗ್ರಾ.ಪಂ ಮಟ್ಟದಲ್ಲಿ ತೆರಿಗೆ ವಸೂಲಾತಿ ವಿಷಯದಲ್ಲಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ತಮ್ಮ ತಮ್ಮ ಗ್ರಾಮ ಪಂಚಾಯತಿಗಳ ಕರ ವಸೂಲಾತಿ ಸಿಬ್ಬಂದಿಯೊಂದಿಗೆ ಮುತುವರ್ಜಿ ವಹಿಸಿ ಅಭಿಯಾನದ ರೂಪದಲ್ಲಿ ಆದ್ಯತೆಯ ಮೇರೆಗೆ ಪ್ರಗತಿ ಸಾಧಿಸಬೇಕು. ಒಂದು ವೇಳೆ ನಿಗದಿಪಡಿಸಿದ ಗುರಿ ಸಾಧಿಸದಿದ್ದಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಲಾವುವುದು.
ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿ ನಿಗದಿತ ಸಮಯಾನಿಸಾರ ಕಚೇರಿಗೆ ಹಾಜರಾಗಿ ಇ-ಹಾಜರಾತಿ ಮೂಲಕ ಕಡ್ಡಾಯವಾಗಿ ತಮ್ಮ ಹಾಜರಾತಿಯನ್ನು ದಾಖಲಿಸಬೇಕು. ಪಂಚಾಯತಿಯ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ತಮಗೆ ವಹಿಸಿರುವ ಕರ್ತವ್ಯ ಜವಾಬ್ದಾರಿ ಅರಿತು ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತಿಯ ಆಡಳಿತ ಶಾಖೆಯ ಅಧೀಕ್ಷಕರಾದ ತಹಸೀನ ಗುಣಕಿ, ಜಿಪಂನ ಸಿಬ್ಬ.ದಿ ಸಂತೋಷ ಪೂಜಾರಿ, ಶಿವರಾಜಕುಮಾರ ಹೊನವಾಡ, ಭೀಮಾಶಂಕರ ಬಿರಾದಾರ, ಜಿ.ಪಂನ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ಎಚ್.ಎಮ್ ರೇವಣ್ಣ ಜಿಲ್ಲಾ ಪ್ರವಾಸ
ವಿಜಯಪುರ 18: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಚ್.ಎಮ್ ರೇವಣ್ಣ ಅವರು ಜಿಲ್ಲಾ ಮಟ್ಟದ ಪ್ರವಾಸ ಕೈಗೊಂಡಿದ್ದಾರೆ.
ಫೆ.20ರಂದು ಸಂಜೆ 7ಗಂಟೆಗೆ ಬಾಗಲಕೋಟೆಯಿಂದ ಹೊರಟು ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಫೆ.21ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ನಡೆಯುವ ವಿಜಯಪುರ ಜಿಲ್ಲಾ ಗ್ಯಾಂರಟಿ ಯೋಜನೆಗಳ ಕಾರ್ಯಾಗಾರ ಹಾಗೂ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸುವರು. ಅದೇ ದಿನ ಸಂಜೆ 4ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 