ವಲಸೆ ಬಂದ ಸೀಗಲ್ ಹಕ್ಕಿಯಲ್ಲಿ ಜಿಪಿಎಸ್ ಟ್ರ್ಯಕರ್
GPS tracker on migrating seagull
ಕಾರವಾರ17 : ಇಲ್ಲಿನ ರವೀಂದ್ರನಾಥ ಠಾಗೋರ್ ಕಡಲ ತೀರಕ್ಕೆ ವಲಸೆ ಬಂದ ಸೀಗಲ್ ಹಕ್ಕಿಯಲ್ಲಿ ಜಿಪಿಎಸ್ ಟ್ರ್ಯಕರ್ ಕಂಡುಬಂದಿದೆ. ಇಲ್ಲಿನ ತಿಮ್ಮಕ್ಕ ಗಾರ್ಡನ್ ಹಿಂಬದಿಯಲ್ಲಿ ಕೂತಿದ್ದ ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಜಿಪಿಎಸ್ ಟ್ರ್ಯಕರ್ ಕಂಡುಬಂದಿದೆ. ಭಿನ್ನವಾಗಿ ಕಂಡ ಈ ಹಕ್ಕಿಯನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ ಮರೈನ್ ಕಡಲ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳು ಹಕ್ಕಿಯನ್ನು ಹಿಡಿದು ಹಕ್ಕಿಯನ್ನು ಪರೀಶೀಲಿಸಿದರು. ಹಕ್ಕಿಯ ಬೆನ್ನಿನಲ್ಲಿದ್ದ ಜಿಪಿಎಸ್ ನಲ್ಲಿ ಚೈನೀಸ್ ವಿಜ್ಞಾನ ಅಕಾಡೆಮಿಯ ರಿಸರ್ಚ್ ಸೆಂಟರ್ ಫಾರ್ ಇಕೋ-ಎನ್ವಿರಾನ್ಮೆಂಟಲ್ ಸೈನ್ಸ್ ವಿಳಾಸವಿದೆ. ಶ್ರೀಲಂಕಾ ವನ್ಯಜೀವಿ ಸಂಶೋಧನಾ ಮಂಡಳಿ ಈ ಸೀಗಲ್ ಹಕ್ಕಿಗಳ ಚಲನ ವಲನ, ಆಹಾರ ಹಾಗೂ ವಲಸೆಯನ್ನು ಗುರುತಿಸಲು ಜಿಪಿಎಸ್ ಟ್ರ್ಯಕರ್ ಬಳಸಿದ್ದರು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಕ್ಕಿಗೆ ಗಾಯವಾದ ಕಾರಣ ಅದು ಹಾರಲಾಗದ ಸ್ಥಿತಿಯಲ್ಲಿತ್ತು . ಅರಣ್ಯ ಅಧಿಕಾರಿಗಳು ಶ್ರೀಲಂಕಾ ವನ್ಯಜೀವಿ ಅಕಾಡೆಮಿಯ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದು, ಹಕ್ಕಿಯನ್ನು ಮರೈನ್ ಅರಣ್ಯ ವಿಭಾಗದ ಕಚೇರಿಯಲ್ಲಿ ಇರಿಸಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 