ಸಿದ್ದರಾಮಯ್ಯ ಭೇಟಿ ಮಾಡಿದ ಜಿಟಿಡಿ: ಮೂರು ವರ್ಷಗಳ ನಂತರ ಮುಂದಿನ ರಾಜಕೀಯ ನಿರ್ಧಾರ ಎಂದ ಜಿ.ಟಿ.ದೇವೇಗೌಡ
ಬೆಂಗಳೂರು, ಡಿ.14 ಜೆಡಿಎಸ್‌ನಿಂದ
ಬಿಜೆಪಿಗೆ ಮುಖ ಮಾಡಿರುವ ಜಿ.ಟಿ.ದೇವೇಗೌಡ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.ಅನಾರೋಗ್ಯ
ಕಾರಣ ಮಲ್ಲೇಶ್ವರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ
ಅವರ ಯೋಗಕ್ಷೇಮ ವಿಚಾರಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಉಳಿಸುವ ಬಗ್ಗೆ ನಮ್ಮ ನಾಯಕರೇ ಹೇಳುತ್ತಿದ್ದರು. ಆದರೂ
ಜನ ಬಿಜೆಪಿ ಪರ ಮತ ಹಾಕಿದ್ದಾರೆ. ಎಲ್ಲಾ ಒಂದೇ ಪಕ್ಷ
ಮಾಡಿಕೊಂಡರೆ ಅಭಿವೃದ್ಧಿ ಆಗುವುದಿಲ್ಲ. ಮೂರೂವರೆ ವರ್ಷ
ಆಡಳಿತ ಪಕ್ಷಕ್ಕೆ ಬೆಂಬಲ ಕೊಡಬೇಕು ಎಂದರು.ಉಪ ಚುನಾವಣೆಯಲ್ಲಿ ಜೆಡಿಎಸ್‌ಗೆ ಅಭ್ಯರ್ಥಿ ಹಾಕುವ
ಅಗತ್ಯ ಇರಲಿಲ್ಲ. ಬೇರೆ ಪಕ್ಷಕ್ಕೆ ಹೋಗುವವರು ಹೋಗುತ್ತಾರೆ. ಇವರು ಆರಾಮಾಗಿ ಇರಬೇಕಿತ್ತು. ಏನು ಆಗುತ್ತಿರಲಿಲ್ಲ. ಕರ್ನಾಟಕದಲ್ಲಿ ಜನ
ಬುದ್ಧಿವಂತರು ಇದ್ದಾರೆ. ಸುಭದ್ರ ಸರ್ಕಾರವನ್ನು
ಜನರು ಬಯಸಿದ್ದಾರೆ ಎಂದರು.ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕುವ ಅವಶ್ಯಕತೆ ಇರಲಿಲ್ಲ.ಯಡಿಯೂರಪ್ಪ
ರಾಜ್ಯದಲ್ಲಿ ಅಭಿವೃದ್ಧಿ ಪರ ಕೆಲಸ ಮಾಡುತ್ತಾರೆ. ಹೀಗಾಗಿ ಅವರೇ ಮುಂದಿನ ಮೂರುವರೆ ವರ್ಷ ಅಧಿಕಾರ
ನಡೆಸಲಿ ಎಂದರುಹುಣಸೂರು ಉಪ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ತಮ್ಮ ಪುತ್ರ ಹರೀಶ್ ಯಾವ ಪಕ್ಷಕ್ಕೂ
ಸೇರಿದವರು ಅಲ್ಲ.ಯೋಗೇಶ್ ಅವರು ಏಕವಚನದಲ್ಲಿ ಮಾತನಾಡಿದ್ದಾರೆ.
ಒಕ್ಕಲಿಗರು ಹೆಚ್ಚಾಗಿರುವ ಊರಿಗೆ ಹೋಗಿ ಯಾರವನು ಜಿ.ಟಿ.
ದೇವೇಗೌಡ ಎಂದು ಮಾತಾಡಿದ್ದಾರೆ ಅಲ್ಲಿಯ ಜನ ಅವರು ಕೊಟ್ಟ ಸೀರೆ ಬೀದಿಗೆ ಎಸೆದು ಸಿಡಿದೆದ್ದಿದ್ದಾರೆ ಎಂದರು.ಬಿಜೆಪಿಗೆ ಸೇರುವ ವಿಚಾರವಾಗಿ
ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ವರ್ಷದ ನಂತರ ಮುಂದಿನ ಚುನಾವಣೆಯಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ.
ಮುಂದಿನ ಮೂರು ವರ್ಷ ಯಾರು ಯಾವ ಪಕ್ಷದಲ್ಲಿ ಇರುತ್ತಾರೆ
ಎಲ್ಲಿಗೆ ಹೋಗುತ್ತಾರೆ ಎನ್ನುವುದು ಗೊತ್ತಾಗಲಿದೆ.
ಈಗ ಜೆಡಿಎಸ್ ಪಕ್ಷದಲ್ಲಿ ಇದ್ದೇನೆ. ಮೂರು ವರ್ಷಗಳ ನಂತರ ರಾಜಕೀಯ ಯಾವ ದಿಕ್ಕಿಗೆ
ತಿರುಗುತ್ತೆ ಆಗ ನಿರ್ಧಾರ ಮಾಡೋಣ ಎಂದು ಮಾರ್ಮಿಕವಾಗಿ ನುಡಿದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 