ಗದಗ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ಕ್ಕೆ ಚಾಲನೆ

ಗದಗ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ಕ್ಕೆ ಚಾಲನೆ  Gadag: Launch of comprehensive revision of electoral rolls – 2026

ಗದಗ 01:  ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಸಂಬಂಧ ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಗದಗ ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭಗೊಂಡಿದೆ.  ಜೂನ್ 30 ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು  ಮನೆ ಮನೆಗೆ ಭೇಟಿ ನೀಡಿ ಮತದಾರರ ಸಮೀಕ್ಷೆ ಹಾಗೂ ಪರೀಶೀಲನೆ ನಡೆಸಲಿದ್ದಾರೆ. ಜುಲೈ 29ರೊಳಗೆ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ ಪೂರ್ಣಗೊಳಿಸಲಾಗುವುದು. ಬಳಿಕ ಆಗಸ್ಟ್‌ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಆಗಸ್ಟ್‌ 5ರಿಂದ ಸೆಪ್ಟೆಂಬರ್ 4ರವರೆಗೆ ಮತದಾರರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 3ರೊಳಗೆ ಆಕ್ಷೇಪಣೆಗಳ ವಿಲೇವಾರಿ ಪೂರ್ಣಗೊಳಿಸಿ, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.  ಈ ಸಂಬಂಧ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಇಟಿಣಟಜಡಿಚಿಣಠ ಈಠ ಮೂಲಕ ಮತದಾರರ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಕೈಗೊಂಡಿದ್ದಾರೆ. ಸಂಗ್ರಹಿಸಿದ ಮಾಹಿತಿಯನ್ನು ಚುನಾವಣಾ ಆಯೋಗದ ಅಧಿಕೃತ ಆಪ್ನಲ್ಲಿ ದಾಖಲಿಸಲಾಗುವುದು.