ಗದಗ : ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ರ್ಯಾಂಡ ಮೈಜೇಶನ್
ಗದಗ 10: ಹಾವೇರಿ ಹಾಗೂ ಬಾಗಲಕೋಟ ಸಾಮಾನ್ಯ ವೀಕ್ಷಕರ ಸಮ್ಮುಖದಲ್ಲಿ ಏಪ್ರೀಲ್ 23 ರಂದು ನಡೆಯುವ ಲೋಕಸಭಾ ಮತದಾನ ಅಧಿಕಾರಿ ಸಿಬ್ಬಂದಿಯನ್ನು ನಿಯಮಿಸುವ 2ನೇ ಸುತ್ತಿನ ರ್ಯಾಂಡಮೈಜೇಶನ್ ಕಾರ್ಯ ಗದುಗಿನ ಜಿಲ್ಲಾಡಳಿತ ಭವನದ ಎನ್.ಐ.ಸಿ ಕಚೇರಿಯಲ್ಲಿಂದು ಜರುಗಿತು.
ಗದಗ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳಲ್ಲಿ ಒಟ್ಟು 4848 ಮತದಾನ ಸಿಬ್ಬಂದಿ 162 ಮೈಕ್ರೋ ಆಬ್ಸರ್ವರ ಅವರುಗಳ 2ನೇ ಸುತ್ತಿನ ರ್ಯಾಂಡಮೈಜೇಶನ್ ಇಂದು ಜರುಗಿದ್ದು ಹಾವೇರಿ ಲೋಕಸಭೆ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮಗೊಳಿಸಲಾಗುವ ಪಟ್ಟಿಯಲ್ಲಿ ಸೂಚಿಸಿದಂತೆ ಸಂಬಂಧಿತ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಡಾ.ಅಖ್ತರ ರಿಯಾಜ್ ತಿಳಿಸಿದರು.
ಮಹಿಳಾ ಅಧಿಕಾರಿ ಸಿಬ್ಬಂದಿಗಳನ್ನು ಅವರ ಕಾರ್ಯವ್ಯಾಪ್ತಿಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಆಯೋಗದ ನಿದರ್ೇಶನದ ರೀತ್ಯಾ ಕ್ರಮ ಜರುಗಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ಟಿ.ಎಲ್.ನರಸಿಂಗಾರಿ, ಹಾವೇರಿ ಲೋಕಸಭಾ ಕ್ಷೇತ್ರದ ವೆಚ್ಚ ವಿಕ್ಷಕ ಹಸನ್ ಅಹ್ಮದ, ಗದಗ ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಗದಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ, ರೋಣ ಸಹಾಯಕ ಚುನಾವಣಾಧಿಕಾರಿ ಡಿ.ಪ್ರಾಣೇಶರಾವ್, ಶಿರಹಟ್ಟಿ ಸಹಾಯಕ ಚುನಾವಣಾಧಿಕಾರಿ ರಾಮಕೃಷ್ಣ ಪಡಗಣ್ಣವರ, ನೊಡೆಲ್ ಅಧಿಕಾರಿ ಕಂಬಾಳಿಮಠ, ಎನ್.ಐ.ಸಿ.ಯ ರಾಮಕೃಷ್ಣ ಸಭೆಯಲ್ಲಿ ಭಾಗವಹಿಸಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 