ಗದಗ 11: ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಅರ್ಹ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲಕ್ಷ್ಮೇಶ್ವರ ತಾಲೂಕಿನಲ್ಲಿ ಯುವಕ ಯುವತಿಯರ ವ್ಹಾಲಿಬಾಲ್ ಪಂದ್ಯಾವಳಿಗಳು ಜರುಗಿದವು. ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಕುಟುಂಬದ ಹಾಗೂ ತಮ್ಮ ವಾರ್ಡಿನ ಅರ್ಹ ಮತದಾರರು ಮತದಾನ ಮಾಡುವಂತೆ ಪ್ರೇರೆಪಿಸಲು ಜಾಗೃತಿಯನ್ನು ಮೂಡಿಸಲಾಯಿತು.