ಗದಗ 08: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಪ್ರೇರೆಪಿಸಲು ಗದಗ ಜಿಲ್ಲಾಡಳಿತ ಭವನದಲ್ಲಿಂದು ಜಿಲ್ಲಾ ಸ್ವೀಪ ಸಮಿತಿ ವತಿಯಿಂದ ಆಶಾ ಕಾರ್ಯಕರ್ತರಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿ.ಪಂ ಮುಖ್ಯಕಾರ್ಯ ನಿವರ್ಾಹಣಾದಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿದರು. ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಟಿ.ದಿನೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿರೂಪಾಕ್ಷರೆಡ್ಡಿ ಮಾದಿನೂರ, ಆರ.ಸಿ.ಎಚ್. ಅಧಿಕಾರಿ ಡಾ. ಎಚ್.ಎಂ.ಹೊನಕೇರಿ, ಆಶಾ ಕಾರ್ಯಕತರ್ೆಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.