ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರ ಜಿಲ್ಲಾ ಪ್ರವಾಸ
Gadag District In-charge Minister Dr. H.K. Patil's District Tour
ಗದಗ 02 : ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರ ಜೂನ್ 2 ರ ಗದಗ ಜಿಲ್ಲಾ ಪ್ರವಾಸದ ವಿವರ.
ಜೂನ್ 2 ರಂದು ಬೆಳಿಗ್ಗೆ 9.30 ಗಂಟೆಗೆ ಸಿದ್ದರಾಮೇಶ್ವರ ನಗರದಲ್ಲಿ ಭವ್ಯ ಭವಿಷ್ಯದ ನಾಳೆಗೆ ಬನ್ನಿ ಬನ್ನಿ ಶಾಲೆಗೆ ಕಾರ್ಯಕ್ರಮದಡಿ ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮಕ್ಕಳ ಮನೆಗಳಿಗೆ ಭೇಟಿ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಬೆಳಿಗ್ಗೆ 10 ಗಂಟೆಗೆ ಕಳಸಪೂರ ರಸ್ತೆ ಯಲ್ಲಿರುವ ರಾಮನಗರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಬೆಳಿಗ್ಗೆ 10.40 ಗಂಟೆಗೆ ನಗರದ ಗಂಗಿಮಡಿಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಬೆಳಿಗ್ಗೆ 11.30 ಗಂಟೆಗೆ ಗದಗ ತಾಲೂಕ ಗ್ಯಾರಂಟಿ ಯೋಜನೆಗಳ ಕಾರ್ಯಲಯದಲ್ಲಿ ಜರುಗುವ ಗದಗ ತಾಲೂಕ ಮಟ್ಟದ ಗ್ಯಾರಂಟಿ ಸಮಿತಿ ಸಭೆಯಲ್ಲಿ ಭಾಗವಹಿಸುವರು.ಮಧ್ಯಾಹ್ನ 12.30 ಗಂಟೆಗೆ ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಾಣಿಸಿದ ಸುಲಭ ಶೌಚಾಲಯ ಕಟ್ಟಡದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಗದಗ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಅಧ್ಯಕ್ಷರುಗಳಿಗೆ ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಕುರಿತು ಕಾರ್ಯಗಾರದಲ್ಲಿ ಭಾಗವಹಿಸುವರು ಎಂದು ಸಚಿವರ ಕಾರ್ಯಲಯ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 